ದೀಪಿಕಾ ಪಡುಕೋಣೆಗೆ ಗಂಡು ಮಗು ಹುಟ್ಟಿದೆ ಅಂತ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು

Public TV
1 Min Read
deepika padukone

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ (Deepika Padukone) ಸದ್ಯ ಚೊಚ್ಚಲ ಮಗು ಬರಮಾಡಿಕೊಳ್ಳಲು ಎದುರು ನೋಡ್ತಿದ್ದಾರೆ. ಸಿನಿಮಾಗೆ ಬ್ರೇಕ್ ಕೊಟ್ಟು ವಿಶ್ರಾಂತಿ ಪಡೆಯುತ್ತಿದ್ದಾರೆ. ಇದರ ನಡುವೆ ನಟಿಗೆ ಗಂಡು ಮಗು ಹುಟ್ಟಿದೆ ಎಂದು ನಕಲಿ ಫೋಟೋವೊಂದನ್ನು ಸೃಷ್ಟಿ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಕಿಡಿಗೇಡಿಗಳು ಹರಿಬಿಟ್ಟಿದ್ದಾರೆ.

DEEPIKA PADUKONE 1

ಸಾಮಾಜಿಕ ಜಾಲತಾಣದಲ್ಲಿ ನಕಲಿ ವಿಡಿಯೋ ಮತ್ತು ಫೋಟೋಗಳು ಹರಿಬಿಡೋದು ಈಗ ಸಾಮಾನ್ಯವಾಗಿದೆ. ಇಂಟರ್‌ನೆಟ್‌ನಲ್ಲಿ ಲೈಕ್, ವಿವ್ಸ್ ಗಿಟ್ಟಿಸಿಕೊಳ್ಳಲು ನಾನಾ ತಂತ್ರಗಳನ್ನು ಕಿಡಿಗೇಡಿಗಳು ಮಾಡುತ್ತಿರುತ್ತಾರೆ. ಈಗ ‘ಪಠಾಣ್’ ಹೀರೋಯಿನ್ ದೀಪಿಕಾಗೆ ಗಂಡು ಮಗು ಹುಟ್ಟಿದೆ ಎನ್ನಲಾದ ಫೋಟೋವೊಂದು ವೈರಲ್ ಆಗುವಂತೆ ಮಾಡಿದ್ದಾರೆ. ಇದನ್ನೂ ಓದಿ:ಬೆಡ್‌ರೂಮ್ ಫೋಟೋ ಹಂಚಿಕೊಂಡ ನಮ್ರತಾ ಗೌಡ

FotoJet 8ಯಾರದ್ದೋ ಫೋಟೋವನ್ನು ಎಡಿಟ್ ಮಾಡಿ ಅದಕ್ಕೆ, ರಣ್‌ವೀರ್ ಸಿಂಗ್ ಮತ್ತು ದೀಪಿಕಾ ಫೋಟೋ ಎಂದು ನಂಬಿಸುವ ಪ್ರಯತ್ನ ಮಾಡಿದ್ದಾರೆ. ಅದೆಷ್ಟೋ ಅಭಿಮಾನಿಗಳು, ದೀಪಿಕಾಗೆ ಗಂಡು ಮಗು ಆಗಿದೆ ಎಂದೇ ಭಾವಿಸಿದ್ದಾರೆ. ಆದರೆ ಅದು ಸುಳ್ಳು. ದೀಪಿಕಾ ಪಡುಕೋಣೆ ಸೆಪ್ಟೆಂಬರ್‌ನಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ. ಮಗುವಿನ ಆಗಮನಕ್ಕಾಗಿ ಇಡೀ ಕುಟುಂಬ ಎದುರು ನೋಡ್ತಿದೆ.

ಅಂದಹಾಗೆ, ಇತ್ತೀಚೆಗೆ ಪ್ರಭಾಸ್ ಜೊತೆಗಿನ ‘ಕಲ್ಕಿ 2898 ಎಡಿ’ ಸಿನಿಮಾ ರಿಲೀಸ್ ಆಗಿತ್ತು. ಈ ಚಿತ್ರದ ಭರ್ಜರಿ ಯಶಸ್ಸಿನ ಮೂಲಕ ನಟಿಯ ಕೆರಿಯರ್‌ಗೆ ತಿರುವು ಸಿಕ್ಕಿದೆ. ಇದರ ಪಾರ್ಟ್‌ 2ಗಾಗಿ ಫ್ಯಾನ್ಸ್‌ ಎದುರು ನೋಡ್ತಿದ್ದಾರೆ.

Share This Article