ಮಂಡ್ಯ: ಪಿಎಸ್ಐ (PSI) ಸಮವಸ್ತ್ರ ಧರಿಸಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ ಪೊಲೀಸ್ (Fake Police) ಅನ್ನು ಅಸಲಿ ಪೊಲೀಸರು ಬಂಧಿಸಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಮದ್ದೂರು ತಾಲೂಕಿನ ಕೆಎಂ ದೊಡ್ಡಿಯಲ್ಲಿ (KM Doddi) ನಡೆದಿದೆ.
ಬೆಂಗಳೂರಿನ ಗೊಟ್ಟಿಗೆರೆ ನಿವಾಸಿ ಸಂಜಯ್ ಬಂಧಿತ ಆರೋಪಿಯಾಗಿದ್ದಾನೆ. ಸಂಜಯ್ ಪಿಎಸ್ಐ ಸಮವಸ್ತ್ರ ಧರಿಸಿ ಕೆಎಂ ದೊಡ್ಡಿ ಸುತ್ತಮುತ್ತ ದ್ವಿಚಕ್ರ ವಾಹನಗಳನ್ನು ತಡೆದು ತಪಾಸಣೆ ನಡೆಸುತ್ತಿದ್ದರು. ಬಳಿಕ ಸಂಚಾರಿ ನಿಯಮ ಉಲ್ಲಂಘನೆಯಾಗಿದೆ ಎಂದು ವಾಹನ ಸವಾರರಿಂದ ಹಣ ವಸೂಲಿ ಮಾಡುತ್ತಿದ್ದ. ನಕಲಿ ಪೊಲೀಸ್ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿರುವುದರ ಬಗ್ಗೆ ಸ್ಥಳೀಯರು ಕೆಎಂ ದೊಡ್ಡಿ ಠಾಣೆಯ ಇನ್ಸ್ಪೆಕ್ಟರ್ ಆನಂದ್ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಎಲ್ಟಿಟಿಇ ಮುಖ್ಯಸ್ಥ ಜೀವಂತವಾಗಿದ್ದಾನಾ? – ಇದು ತಮಾಷೆ ಎಂದ ಶ್ರೀಲಂಕಾ
Advertisement
Advertisement
ಈ ಮಾಹಿತಿ ಬೆನ್ನಲ್ಲೇ ತಕ್ಷಣ ಎಚ್ಚೆತ್ತ ಕೆಎಂ ದೊಡ್ಡಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಬಳಿಕ ಸಂಜಯ್ ಪಿಎಸ್ಐ ಸಮವಸ್ತ್ರದಲ್ಲಿ ಇರುವಾಗಲೇ ಹಿಡಿದು ವಿಚಾರಣೆ ಮಾಡಿದಾಗ ತಾನೊಬ್ಬ ನಕಲಿ ಪೊಲೀಸ್ ಎಂದು ತಪ್ಪೊಪ್ಪಿಕೊಂಡಿದ್ದಾನೆ.
Advertisement
ಇದೀಗ ಆರೋಪಿ ಸಂಜಯ್ಗೆ ವಾರ್ನ್ ಮಾಡಲಾಗಿದ್ದು, ಕೋರ್ಟ್ ಜಾಮೀನಿನ ಮೇಲೆ ಆತನನ್ನು ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಮಂಡ್ಯ ಉಸ್ತುವಾರಿ ಆಗಲು ಒಪ್ಪದ ಸಚಿವರು
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k