ಮಂಗಳೂರು: ಮೋಸ ಮಾಡೋಕೆ ದುಡ್ಡು ಮಾಡೋಕೆ ಅದೆಂಥ ಅಡ್ಡದಾರಿಗಳನ್ನು ಹಿಡಿಯುತ್ತಾರೆ ಅಂದ್ರೆ ದೇವರನ್ನು ಕೂಡ ಬಿಡಲ್ಲ. ಕೊಲ್ಲೂರು ಮೂಕಾಂಬಿಕೆಯ (Kolluru Mookambika Temple) ಹೆಸರಿನಲ್ಲಿ ನಕಲಿ ಟ್ರಸ್ಟ್ (Fake Trust) ಶುರುವಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಕೊಲ್ಲೂರು ಡಿವೋಟಿಸ್ ಟ್ರಸ್ಟ್ ಅನ್ನುವ ನಕಲಿ ಲಿಂಕ್ ಹರಿದಾಡುತ್ತಿದೆ.
ದೇಗುಲಕ್ಕೆ ದೇಣಿಗೆ ಹರಕೆ ಸಲ್ಲಿಸುವ ಭಕ್ತರು ಇದರಲ್ಲಿ ದುಡ್ಡನ್ನು ಕಳಿಸಿದ್ದಾರಂತೆ. ಭಕ್ತರೊಬ್ಬರು ಹಣ ಕಳಿಸಿರುವ ಬಗ್ಗೆ ದೇಗುಲಕ್ಕೆ ಇ-ಮೇಲ್ ಮಾಡಿದಾಗ ಈ ಅಕೌಂಟ್‍ಗೂ ದೇವಸ್ಥಾನಕ್ಕೂ ಸಂಬಂಧ ಇಲ್ಲ ಅಂತಾ ಸ್ಪಷ್ಟನೆ ಬಂದಿದೆ. ಹೀಗಾಗಿ ಭಕ್ತರಾಗಿರುವ ರಾಘವೇಂದ್ರ ಹಾಗೂ ಧನಂಜಯ್ ಈ ಟ್ರಸ್ಟ್ ವಿರುದ್ಧ ಈಗ ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
Advertisement
Advertisement
ಕೇರಳ (Kerala) ಮೂಲದಲ್ಲಿ ಈ ಟ್ರಸ್ಟ್ ನೋಂದಣಿಯಾಗಿರೋದು ಗೊತ್ತಾಗಿದೆ. ದೇಗುಲದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಕ್ತರನ್ನು ವಂಚಿಸಲಾಗುತ್ತಿದೆ. ಈ ಬಗ್ಗೆ ದೇಗುಲದ ಆಡಳಿತ ಮಂಡಳಿಯ ಗಮನಕ್ಕೆ ಬಾರದೇ ಇದ್ದಿದ್ದು ಅಚ್ಚರಿ ಅನ್ನೋದು ಭಕ್ತರ ಅಸಮಾಧಾನ. ಹೀಗಾಗಿ ಇದರ ಬಗ್ಗೆ ತನಿಖೆ ಮಾಡುವಂತೆ ಆಗ್ರಹಿಸಲಾಗಿದೆ. ಇದನ್ನೂ ಓದಿ: ವಿಮಾನ ದುರಂತದಿಂದ ಕೂದಲೆಳೆ ಅಂತರದಲ್ಲಿ ಧ್ರುವ ಸರ್ಜಾ & ಮಾರ್ಟಿನ್ ಟೀಂ ಪಾರು!
Advertisement
2022ರಿಂದ ಈ ಟ್ರಸ್ಟ್ ಹೆಸರಿನಲ್ಲಿ ಭಕ್ತರಿಗೆ ಮಕ್ಮಲ್ ಟೋಪಿ ಹಾಕುತ್ತಿರೋದು ಗಮನಕ್ಕೆ ಬಂದಿದೆ. ಕೋಟಿ ಕೋಟಿ ದುಡ್ಡನ್ನು ಈ ಟ್ರಸ್ಟ್ ಲಪಟಾಯಿಸಿರುವ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಈ ಬಗ್ಗೆ ಮುಜರಾಯಿ ಇಲಾಖೆ ಸೂಕ್ತ ತನಿಖೆ ಮಾಡಬೇಕಾಗಿದೆ.