ಚಂದ್ರಶೇಖರ ಕಂಬಾರರ ಹೆಸರಿನಲ್ಲಿ ವಂಚನೆಗೆ ಯತ್ನ, ದೂರು ದಾಖಲು

Public TV
1 Min Read
chandrashekhar kambar 1

ಬೆಂಗಳೂರು:  ಕಾದಂಬರಿಕಾರ, ನಾಟಕಕಾರ, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕ, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿ ಡಾ.ಚಂದ್ರಶೇಖರ ಕಂಬಾರ ಹೆಸರಿನಲ್ಲಿ ವಂಚನೆಗೆ ಯತ್ನ ನಡೆಸಿರುವ ವಿಚಾರ ಬೆಳಕಿಗೆ ಬಂದಿದೆ.

ಚಂದ್ರಶೇಖರ ಕಂಬಾರ ಹೆಸರಿನಲ್ಲಿ ವಾಟ್ಸಪ್‌ ಸಂದೇಶ ಕಳಿಸುತ್ತಿರುವ ಅಪರಿಚಿತರು ಧನ ಸಹಾಯ ಮಾಡುವಂತೆ ಮನವಿ ಮಾಡುತ್ತಿದ್ದಾರೆ. ಈ ಸಂಬಂಧ ಬೆಂಗಳೂರು ದಕ್ಷಿಣ ವಿಭಾಗದ ಸೈಬರ್‌ ಅಪರಾಧ ವಿಭಾಗಕ್ಕೆ ಚಂದ್ರಶೇಖರ ಕಂಬಾರ ದೂರು ನೀಡಿದ್ದಾರೆ.  ಇದನ್ನೂ ಓದಿ: 1 ಲೀಟರ್ ಅಡುಗೆ ಎಣ್ಣೆ 555 ರೂ., ಕೆಜಿ ತುಪ್ಪ 605 ರೂ.ಗೆ ದಿಢೀರ್ ಏರಿಕೆ

cyber attack 1

ದೂರಿನಲ್ಲಿ ಏನಿದೆ?
ನನ್ನ ಹೆಸರು ಮತ್ತು ಫೋಟೋ ಬಳಸಿ ನನಗೆ ಧನ ಸಹಾಯ ಮಾಡಿ ಎಂದು ವಿವಿಧ ಕಡೆ ವಾಟ್ಸಪ್‌ನಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ಇದನ್ನು ಸಾರ್ವಜನಿಕರು ನಂಬಬಾರದು. ಈ ರೀತಿ ನನ್ನ ಹೆಸರು ದುರುಪಯೋಗವಾಗದಂತೆ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

Share This Article