ನವದೆಹಲಿ: ಕೇಂದ್ರ ಸರ್ಕಾರ ಸಂಸದರ ಐಫೋನ್‌ಗಳಳನ್ನು (iPhone) ಹ್ಯಾಕ್ ಮಾಡಿ ಕದ್ದಾಲಿಕೆ ಮಾಡುತ್ತಿದೆ ಎಂಬ ವಿಪಕ್ಷಗಳ ಆರೋಪದ ಬೆನ್ನಲ್ಲೇ ಆಪಲ್ (Apple) ಕಂಪನಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ.
ಆಪಲ್ ಹೇಳಿಕೆಯಲ್ಲಿ ಏನಿದೆ?
ರಾಜ್ಯ ಪ್ರಾಯೋಜಿತ ದಾಳಿ ಕಾಲಾನಂತರದಲ್ಲಿ ವಿಕಸನಗೊಳ್ಳುತ್ತದೆ. ಈ ದಾಳಿಗಳನ್ನು ಪತ್ತೆಹಚ್ಚುವುದು ಕಷ್ಟ. ಅಪೂರ್ಣವಾಗಿರುವ ಬೆದರಿಕೆ ಗುಪ್ತಚರ ಸಂಕೇತಗಳ ಮೇಲೆ ಅವಲಂಬಿತವಾಗಿದೆ. ಆಪಲ್‌ನ ಕೆಲವೊಂದು ಬೆದರಿಕೆ ಸೂಚನೆಗಳು ತಪ್ಪು ಅಲಾರಂಗಳಾಗಿರಬಹುದು. ಈ ದಾಳಿಗಳು ಪತ್ತೆಯಾಗದಿರುವ ಸಾಧ್ಯತೆಯಿದೆ. ಈ ದಾಳಿಗಳನ್ನು ಪತ್ತೆಹಚ್ಚಲು ಸಾಧ್ಯವಿಲ್ಲ. ನಾವು ಬೆದರಿಕೆ ಅಧಿಸೂಚನೆಗಳನ್ನು ನೀಡಲು ಕಾರಣವೇನು ಎಂಬುದರ ಕುರಿತು ಮಾಹಿತಿಯನ್ನು ಒದಗಿಸಲು ನಮಗೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿದೆ.
Advertisement
Advertisement
ಮಾಧ್ಯಮಗಳಲ್ಲಿ ಬಂದಿರುವ ಮಾಹಿತಿ ಪ್ರಕಾರ ಸುಮಾರು 150 ದೇಶಗಳ ವ್ಯಕ್ತಿಗಳಿಗೆ ನೋಟಿಫಿಕೇಶನ್ ಹೋಗಿದೆ. ಉಗಾಂಡದ ರಾಜಕೀಯ ನಾಯಕರ ಐಫೋನಿಗೆ ಈ ರೀತಿಯ ಎಚ್ಚರಿಕೆ ಸಂದೇಶ ಬಂದಿದೆ. ಇದನ್ನೂ ಓದಿ: ಕೇಂದ್ರದಿಂದ ಐಫೋನ್ ಕದ್ದಾಲಿಕೆಗೆ ಯತ್ನ – ಎಚ್ಚರಿಕೆ ಸಂದೇಶ ಬಂದಿದ್ದಾಗಿ ಪ್ರತಿಪಕ್ಷ ನಾಯಕರ ಆರೋಪ
Advertisement
ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ಕಾಂಗ್ರೆಸ್ ನಾಯಕ ಶಶಿ ತರೂರ್, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹಾಗೂ ಶಿವಸೇನಾದ (ಉದ್ಧವ್ ಬಣ) ಪ್ರಿಯಾಂಕಾ ಚತುರ್ವೇದಿ ಅವರು ತಮ್ಮ ಐ-ಫೋನ್‌ಗಳ ಮೇಲೆ ಸರ್ಕಾರಿ ಪ್ರಾಯೋಜಿತ ದಾಳಿಕೋರರು ಟಾರ್ಗೆಟ್ ಮಾಡುತ್ತಿರಬಹುದು ಎಂದು ಆಪಲ್ ಕಂಪೆನಿಯಿಂದ ಫೋನ್ ಹಾಗೂ ಇ-ಮೇಲ್‌ಗಳಿಗೆ ಎಚ್ಚರಿಕೆ ಸಂದೇಶ ಬಂದಿರುವುದಾಗಿ ಹೇಳಿದ್ದಾರೆ.
Advertisement
Received from an Apple ID, [email protected], which I have verified. Authenticity confirmed. Glad to keep underemployed officials busy at the expenses of taxpayers like me! Nothing more important to do?@PMOIndia @INCIndia @kharge @RahulGandhi pic.twitter.com/5zyuoFmaIa
— Shashi Tharoor (@ShashiTharoor) October 31, 2023
ಆಪಲ್‌ನಿಂದ ಬಂದ ಸಂದೇಶದಲ್ಲಿ ಏನಿದೆ?
ನೀವು ಸರ್ಕಾರಿ ಪ್ರಾಯೋಜಿತ ದಾಳಿಕೋರರಿಂದ ಗುರಿಯಾಗುತ್ತಿದ್ದೀರಿ. ಅವರು ನಿಮ್ಮ ಆಪಲ್ ಐಡಿಗೆ ಸಂಬಂಧಿಸಿದ ಐಫೋನ್‌ಗೆ ದೂರದಿಂದ ಕದ್ದಾಲಿಕೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆಪಲ್‌ನ ಸಂದೇಶ ಹೇಳಿದೆ.
ಈ ದಾಳಿಕೋರರು ನೀವು ಯಾರು ಅಥವಾ ನೀವು ಏನು ಮಾಡುತ್ತೀರಿ ಎಂಬ ಆಧಾರದಲ್ಲಿ ನಿಮ್ಮನ್ನು ವ್ಯಕ್ತಿಗತವಾಗಿ ಟಾರ್ಗೆಟ್ ಮಾಡುತ್ತಿರುವ ಸಾಧ್ಯತೆ ಇದೆ. ಇದರಿಂದ ನಿಮ್ಮ ಸೂಕ್ಷ್ಮ ಡೇಟಾ, ಸಂಹವನಗಳು ಅಥವಾ ಕ್ಯಾಮೆರಾ ಮತ್ತು ಮೈಕ್ರೋಫೋನ್‌ಗಳನ್ನು ಕದಿಯಲು ಅವರಿಗೆ ಸಾಧ್ಯವಾಗಲಿದೆ. ಇದು ಸುಳ್ಳು ಎಚ್ಚರಿಕೆಯಾಗುವ ಸಾಧ್ಯತೆ ಇದ್ದರೂ, ಈ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಿ ಎಂದು ಸಂದೇಶದಲ್ಲಿದೆ.
Web Stories