ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಪೋಸ್ಟ್ ಹಾಕಿದ ಆರೋಪದಡಿ ಬೆಳಗಾವಿ ಜಿಲ್ಲಾ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಕರುನಾಡ ಕುರುಬ ಗೌಡ್ರು’ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಲ್ಲಿ ಈ ಪೋಸ್ಟ್ ಪ್ರಕಟವಾಗಿತ್ತು. ಪೋಸ್ಟ್‌ನಲ್ಲಿ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಆರೋಪಿಸಲಾಗಿತ್ತು. ಅಲ್ಲದೆ ಸಿದ್ದರಾಮಯ್ಯ ವಿರುದ್ಧ 37 ಶಾಸಕರ ಸಹಿ ಸಂಗ್ರಹಿಸಿದ್ದಾರೆ ಎಂಬ ವದಂತಿಯನ್ನೂ ಹರಡಲಾಗಿತ್ತು.
ಈ ಮಾಹಿತಿ ಸಂಪೂರ್ಣ ಸುಳ್ಳು ಎಂದು ಆರೋಪಿಸಿ ಸತೀಶ್ ಜಾರಕಿಹೊಳಿ ಅವರ ಆಪ್ತರಿಂದ ದೂರು ನೀಡಲಾಗಿದೆ. ವಾಲ್ಮೀಕಿ ಸಮುದಾಯದ ಮುಖಂಡ ರಾಜಶೇಖರ ತಳವಾರ ಅವರು ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ರಾಜೀನಾಮೆ ಕೊಟ್ಟ ಬೆನ್ನಲ್ಲೇ ಸಿದ್ದರಾಮಯ್ಯ ದೆಹಲಿಗೆ ಹೋಗಿದ್ಯಾಕೆ?
