DistrictsKarnatakaLatestMandya

ಹಬ್ಬದ ದಿನವೇ ಆತ್ಮಹತ್ಯೆಗೆ ಶರಣಾದ ದಂಪತಿ

ಮಂಡ್ಯ: ಗಂಡ-ಹೆಂಡತಿ ಇಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಸಾದೋಳಲು ಗ್ರಾಮದಲ್ಲಿ ನಡೆದಿದೆ.

ರವೀಶ್ (35) ಮತ್ತು ಪತ್ನಿ ಅರುಣಾ(28) ಆತ್ಮಹತ್ಯೆಗೆ ಶರಣಾದ ದಂಪತಿ. ಶುಕ್ರವಾರ ತಡ ರಾತ್ರಿ ಈ ಇಬ್ಬರು ತಮ್ಮ ಮನೆಯಲ್ಲಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕೌಟುಂಬಿಕ ಕಲಹವೇ ಕಾರಣ ಎಂದು ಶಂಕಿಸಲಾಗಿದೆ.

ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related Articles

Leave a Reply

Your email address will not be published. Required fields are marked *