ಚಾಮರಾಜನಗರ: ಕುಡಿದ ಮತ್ತಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯೊಂದಿಗೆ (Wife) ಜಗಳವಾಡಿ ಬ್ಲೇಡಿನಿಂದ ಕತ್ತು ಕೊಯ್ದುಕೊಂಡ ಘಟನೆ ಕೊಳ್ಳೇಗಾಲ (Kollegala) ತಾಲೂಕಿನ ಕಾಮಗೆರೆಯಲ್ಲಿ ನಡೆದಿದೆ.
ಕತ್ತು ಕೊಯ್ದುಕೊಂಡ ವ್ಯಕ್ತಿಯನ್ನು ಲೋಕೇಶ್ ಎಂದು ಗುರುತಿಸಲಾಗಿದೆ. ಈತ ನಿತ್ಯ ಕುಡಿದು ಬಂದು ಪತ್ನಿ ಜೊತೆ ಗಲಾಟೆ ಮಾಡುತ್ತಿದ್ದ. ಈ ಬಗ್ಗೆ ಪತ್ನಿ ಪೊಲೀಸರಿಗೆ ದೂರು ನೀಡಿದ್ದಳು. ಪೊಲೀಸರು ಬಂದು ಬುದ್ಧಿವಾದ ಹೇಳಿಹೋಗಿದ್ದರು. ಪೊಲೀಸರು ಹೋದ ಬಳಿಕ ಲೋಕೇಶ್ ಬ್ಲೇಡ್ ತೆಗೆದುಕೊಂಡು ಕತ್ತು ಕೊಯ್ದುಕೊಂಡಿದ್ದಾನೆ. ಇದನ್ನೂ ಓದಿ: ಚನ್ನರಾಯಪಟ್ಟಣ | ಸೈಕಲ್‌ಗೆ ಕಾರು ಡಿಕ್ಕಿ – ಕಾಲೇಜು ವಿದ್ಯಾರ್ಥಿ ದುರ್ಮರಣ
ಗಾಯಗೊಂಡ ಲೋಕೇಶ್‍ಗೆ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಹಿಂದೂ ಯುವತಿ, ಮುಸ್ಲಿಂ ಯುವಕ ಪ್ರೇಮಿಗಳ ಬರ್ಬರ ಹತ್ಯೆ

