ಬಳ್ಳಾರಿ: ಕೌಟುಂಬಿಕ ಕಲಹ (Family Dispute) ಹಿನ್ನೆಲೆ ಕಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿ (Junior Female Health Security Officer) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ (Vijayanagar) ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಬಲ್ಲಾಹುಣ್ಣಿ ಗ್ರಾಮದಲ್ಲಿ ನಡೆದಿದೆ.
ಶೀಲಾ (28) ಆತ್ಮಹತ್ಯೆ ಮಾಡಿಕೊಂಡಿರುವ ಕಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿ. ಬಲ್ಲಾಹುಣ್ಣಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿಯಾಗಿದ್ದ ಶೀಲಾ, ಕೌಟುಂಬಿಕ ಕಲಹ ಹಿನ್ನೆಲೆ ವಿಷ ಸೇವಿಸಿದ್ದರು. ವಿಷ ಸೇವಿಸಿದ್ದ ಶೀಲಾ ಅವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಎಸ್ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ಸ್ಪೇಸ್ಎಕ್ಸ್ ಸಾಧನೆ – ರಾಕೆಟ್ ಉಡಾವಣಾ ಸ್ಥಳದಲ್ಲೇ ಬೃಹತ್ ಸ್ಟಾರ್ಶಿಪ್ ಯಶಸ್ವಿ ಲ್ಯಾಂಡಿಂಗ್!
ಚಿಕಿತ್ಸೆಗೆ ಸ್ಪಂದಿಸದೇ ಇಂದು ನಿಧನರಾಗಿದ್ದಾರೆ. ಘಟನೆ ಸಂಬಂಧ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಮಾಡುತ್ತೇನೆ: ಹೆಚ್ಡಿಕೆ
