– ಕ್ರಮಿನಾಶಕ ಕುಡಿದು ಆಸ್ಪತ್ರೆ ಪಾಲಾದ ಮಹಿಳೆ
ಚಿಕ್ಕಬಳ್ಳಾಪುರ: ಜಗಳದ ಬಳಿಕ ಮಲಗಿದ್ದ ಗಂಡನ (Husband) ಮರ್ಮಾಂಗಕ್ಕೆ ಹೆಂಡತಿ (Wife) ಒದ್ದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಚಿಂತಾಮಣಿ ತಾಲೂಕಿನ ವೆಂಕಟರಾಯನಕೋಟೆ ಗ್ರಾಮದಲ್ಲಿ ನಡೆದಿದೆ.
ಇಬ್ಬರು ಕಳೆದ ಒಂದು ವರ್ಷದ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ನಂತರ ಮಹಿಳೆ ಚಿತ್ರ ವಿಚಿತ್ರವಾಗಿ ವರ್ತನೆ ಮಾಡುತ್ತಿದ್ದಳಂತೆ. ವಿನಾಕಾರಣ ಗಂಡನ ಜೊತೆ ಕ್ಯಾತೆ ತೆಗೆದು ಜಗಳ ಮಾಡುತ್ತಿದ್ದಳಂತೆ. ಇದೇ ರೀತಿ ಬೆಳಿಗ್ಗೆ ಗಂಡನ ಬಟ್ಟೆ ಹರಿದು ಹಾಕಿ ಜೋರು ಗಲಾಟೆ ಮಾಡಿದ್ದಳಂತೆ. ನಂತರ ಮಧ್ಯರಾತ್ರಿ ಮನೆಯಲ್ಲಿ ಮಲಗಿದ್ದ ಗಂಡನ ಮರ್ಮಾಂಗಕ್ಕೆ ಬಲವಾಗಿ ಒದ್ದಿದ್ದಾಳೆ. ಬಳಿಕ ಆತನೇ ಆಂಬುಲೆನ್ಸ್‌ಗೆ ಕರೆ ಮಾಡಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಇದನ್ನೂ ಓದಿ: ಬೆಂಗಳೂರು | ನಿಂತಿದ್ದ ಕ್ಯಾಂಟರ್‌ಗೆ ಟಾಟಾ ಏಸ್ ಡಿಕ್ಕಿ – ಸ್ಥಳದಲ್ಲೇ ಮೂವರು ಸಾವು
ಬೆಳಗ್ಗೆ ಗಂಡನ ನೋಡಲು ಆಸ್ಪತ್ರೆಗೆ ಬಂದ ಮಹಿಳೆಗೆ ಗಂಡನನ್ನ ನೋಡಲು ಕುಟುಂಬಸ್ಥರು ಅವಕಾಶ ನೀಡಿಲ್ಲ. ಇದಾದ ಬಳಿಕ ಪೊಲೀಸರಿಗೆ ದೂರು ಕೊಟ್ಟಿದ್ದಾರೆ ಎಂದು ಮಹಿಳೆ ಕ್ರೀಮಿನಾಶಕ ಸೇವಿಸಿದ್ದಾಳೆ. ಅಸ್ವಸ್ಥಳಾಗಿದ್ದ ಮಹಿಳೆಯನ್ನು ಕೂಡಲೇ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಬೆಕ್ಕು ಸಾಕ್ಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ ವೈದ್ಯೆ

