ಹುಬ್ಬಳ್ಳಿ: ಕುಟುಂಬ ಕಲಹದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿದ್ಯುತ್ ಟವರ್ ಏರಿ ಹೈಡ್ರಾಮಾ ಸೃಷ್ಟಿಸಿದ್ದ ವ್ಯಕ್ತಿಯನ್ನು ಹೆಸ್ಕಾಂ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
Advertisement
ಇಲ್ಲಿನ ಬಿಡ್ನಾಳದ 11 ಕೆವಿ ಹೈಟೆನ್ಷನ್ ಟವರ್ ಮೇಲೆ ಏರಿ ರಾಘವೇಂದ್ರ ಬಳ್ಳಾರಿ ಎಂಬಾತ ಆತ್ಮಹತ್ಯೆಗೆ ಮುಂದಾಗಿದ್ದಾನೆ. ಇದನ್ನು ಗಮನಿಸಿದ ವ್ಯಕ್ತಿಯೊಬ್ಬರು ಹೆಸ್ಕಾಂ ಕಚೇರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಆದರೆ ವ್ಯಕ್ತಿ ಹತ್ತಿರುವುದು ಯಾವ ಲೈನ್ ಟವರ್ ಮೇಲೆ ಎಂಬುವುದು ಖಾತ್ರಿಯಾಗಿರಲಿಲ್ಲ. ಕೂಡಲೇ ಎಚ್ಚೆತ್ತುಕೊಂಡ ಗ್ರಾಮೀಣ ಉಪವಿಭಾಗದ ಕಾರ್ಯಾನಿರ್ವಾಹಕ ಅಭಿಯಂತರ ಕಿರಣಕುಮಾರ್, ಆ ಮಾರ್ಗದಲ್ಲಿ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಿದ್ದಾರೆ. ಇತ್ತ ರಾಘವೇಂದ್ರ ವಿದ್ಯುತ್ ತಂತಿಯನ್ನು ಸ್ಪರ್ಶಿಸುತ್ತಿದ್ದಂತೆ ಅತ್ತ ವಿದ್ಯುತ್ ಸಂಪರ್ಕ ಕಡಿತಗೊಂಡಿತು. ಇದರಿಂದ ರಾಘವೇಂದ್ರನ ಪ್ರಾಣ ಉಳಿದಿದೆ. ಇದನ್ನೂ ಓದಿ: ರಾಷ್ಟ್ರಧ್ವಜ ರಕ್ಷಣಾ ಅಭಿಯಾನ ಆರಂಭಿಸಿದ ಯೂತ್ ಕಾಂಗ್ರೆಸ್ – ಜಗದೀಶ್ ಶೆಟ್ಟರ್‌ಗೆ ಧ್ವಜ ಕಾಣಿಕೆ ನೀಡಿ ಚಾಲನೆ
Advertisement
Advertisement
ಬಳಿಕ ಪೊಲೀಸರು ಹಾಗೂ ಹೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರಾಘವೇಂದ್ರನಿಗೆ ಬುದ್ದಿ ಹೇಳಿ ಮನೆಗೆ ಕಳುಹಿಸಿದ್ದಾರೆ. ಕ್ಷಣದಲ್ಲೇ ಕಾರ್ಯಪ್ರವೃತರಾದ ಹೆಸ್ಕಾಂ ಸಿಬ್ಬಂದಿಗೆ ಪೊಲೀಸರು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.