ಕೌಟುಂಬಿಕ ದ್ವೇಷ – ಚಾಕುವಿನಿಂದ ಇರಿದು ನರ್ಸ್ ಹತ್ಯೆ

Public TV
1 Min Read
nurse 3

ಪಾಟ್ನಾ: ವ್ಯಕ್ತಿಯೋರ್ವ ನರ್ಸ್ (Nurse) ಅನ್ನು ಚಾಕುವಿನಿಂದ ಹಲವು ಬಾರಿ ಇರಿದು ಕೊಂದ ಬಳಿಕ ಅಲ್ಲಿಂದ ಪರಾರಿಯಾದ ಘಟನೆ ಬಿಹಾರದ (Bihar) ಪಾಟ್ನಾದಲ್ಲಿ (Patna) ನಡೆದಿದೆ.

ಮೃತ ನರ್ಸ್ ಅನ್ನು ಸೋನಿ ಕುಮಾರಿ (25) ಎಂದು ಗುರುತಿಸಲಾಗಿದ್ದು, ಕೌಟುಂಬಿಕ ದ್ವೇಷದ (Family Feud) ಹಿನ್ನೆಲೆ ಆಕೆಯನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ನಗರದ ಜನನಿಬಿಡ ತಾಣವಾದ ಪಾಟ್ನಾದ ಕಂಕರ್‌ಬಾಗ್‌ನಲ್ಲಿ ಶನಿವಾರ ಸಂಜೆ ಸುಮಾರು 4 ಗಂಟೆಯ ವೇಳೆಗೆ ಘಟನೆ ನಡೆದಿದೆ. ಇದನ್ನೂ ಓದಿ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 7 ಮಂದಿ ಸಾವು

ಘಟನೆಯಲ್ಲಿ ನರ್ಸ್ ತೀವ್ರ ಗಾಯಗೊಂಡಿದ್ದು, ಕೂಡಲೇ ದಾರಿಹೋಕರು ಆಕೆಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆಕೆ ಕೊನೆಯುಸಿರೆಳೆದಿದ್ದಾಳೆ. ಈಕೆ ಪೂರ್ಣಿಯಾ ಮೂಲದವಳಾಗಿದ್ದು, ಪಾಟ್ನಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದಳು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಭೀಕರ ಅಪಘಾತ- ಒಂದೇ ಕುಟುಂಬದ ನಾಲ್ವರ ದುರ್ಮರಣ

ನರ್ಸ್ ಆಸ್ಪತ್ರೆಯಲ್ಲಿ ತನ್ನ ಕೆಲಸ ಮುಗಿಸಿ ಹಾಸ್ಟೆಲ್‌ಗೆ ತೆರಳುತ್ತಿದ್ದ ಸಂದರ್ಭ ಆಕೆಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಈ ಕುರಿತು ತನಿಖೆ ನಡೆಯುತ್ತಿದ್ದು, ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಘಟನೆ ಕುರಿತು ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. ಅಲ್ಲದೇ ಆರೋಪಿಯ ಪತ್ತೆಗಾಗಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ವೆಬ್ ಸಿರೀಸ್‍ನಿಂದ ಪ್ರೇರಣೆ – ದಂಪತಿ ಕೊಲೆಗೈದು ದರೋಡೆ ಮಾಡಿದ್ದ ಲಾ ಸ್ಟೂಡೆಂಟ್ ಅರೆಸ್ಟ್

Web Stories

Share This Article