ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ (Contractor Santosh Patil) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (Siddaramaiah) ಅವರನ್ನು ಮೃತ ಸಂತೋಷ್ ಪಾಟೀಲ್ ಕುಟುಂಬಸ್ಥರು ಶುಕ್ರವಾರ ಭೇಟಿಯಾಗಿದ್ದಾರೆ. ಈ ವೇಳೆ ಸಿಐಡಿ (CID) ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.
ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸಂತೋಷ್ ಪಾಟೀಲ್ ಪತ್ನಿ ಜಯಶ್ರೀ, ಪುತ್ರ, ತಾಯಿ ಪಾರ್ವತಿ, ಸಹೋದರ ಪ್ರಶಾಂತ್ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಬಿ ರಿಪೋರ್ಟ್ ಸಲ್ಲಿಕೆಯಿಂದ ನಮಗೆ ಅನ್ಯಾಯ ಆಗಿದೆ. ಪ್ರಕರಣವನ್ನು ಸಿಬಿಐ ಇಲ್ಲವೇ ಸಿಐಡಿಗೆ ವಹಿಸಬೇಕೆಂದು ಸಿಎಂಗೆ ಮನವಿ ಮಾಡಿದರು.
ಮನವಿ ನೀಡುವ ವೇಳೆ ಸಿಎಂ ಸಿದ್ದರಾಮಯ್ಯ ಎದುರು ಸಂತೋಷ್ ತಾಯಿ, ಪತ್ನಿ ಕಣ್ಣೀರು ಹಾಕಿದ್ದಾರೆ. ಬಿಕ್ಕಿಬಿಕ್ಕಿ ಅತ್ತ ಸಂತೋಷ್ ಕುಟುಂಬಸ್ಥರನ್ನು ಸಿದ್ದರಾಮಯ್ಯ ಸಂತೈಸಿದ್ದಾರೆ. ಇದನ್ನೂ ಓದಿ: ಬಿಜೆಪಿಯವರು ಹತಾಶರಾಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ: ಸಿದ್ದರಾಮಯ್ಯ
2022ರ ಏಪ್ರಿಲ್ 13 ರಂದು ಉಡುಪಿಯ ಲಾಡ್ಜ್ವೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಮಾಜಿ ಸಚಿವ ಕೆಎಸ್ ಈಶ್ವರಪ್ಪ ವಿರುದ್ಧ ಆರೋಪ ಮಾಡಿ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ಇದನ್ನೂ ಓದಿ: 4 ವರ್ಷದ ಹಳೆಯ ಕಾಮಗಾರಿಗಳ ಎಸ್‌ಐಟಿ ತನಿಖೆ ಬೇಡ: ಕೆಂಪಣ್ಣ
Web Stories