ChikkaballapurCrimeDistrictsKarnatakaLatestMain Post

ಮಗಳು ಅನ್ಯ ಜಾತಿ ಯುವಕನ ಜೊತೆ ಪರಾರಿ – ತಂದೆ, ತಾಯಿ, ತಮ್ಮ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಮಗಳು (Daughter) ಅನ್ಯ ಜಾತಿ ಯುವಕನ ಜೊತೆ ಪರಾರಿಯಾದ ಹಿನ್ನೆಲೆ ಮಾನ ಮರ್ಯಾದೆಗೆ ಅಂಜಿದ ತಂದೆ, ತಾಯಿ ಹಾಗೂ ಆಕೆಯ ತಮ್ಮ ಮೂವರು ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ತಂದೆ ಶ್ರೀರಾಮಪ್ಪ, ತಾಯಿ ಸರೋಜಮ್ಮ, ಹಾಗೂ ಇವರ ಮಗ ಮನೋಜ್ ಆತ್ಮಹತ್ಯೆಗೆ ಶರಣಾದವರು. ಅಂದಹಾಗೆ ಶ್ರೀರಾಮಪ್ಪ-ಸರೋಜಮ್ಮ ದಂಪತಿಯ ಮಗಳು ಅರ್ಚನಾ ಅನ್ಯ ಜಾತಿ ಯುವಕನ ಜಾತಿ ಕಾಣೆಯಾಗಿದ್ದಾಳೆ ಎನ್ನಲಾಗಿದ್ದು, ಈ ಸಂಬಂಧ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಗೆ ನಿನ್ನೆಯಷ್ಟೇ ಪೋಷಕರು ದೂರು ನೀಡಿದರು. ಇದೇ ವಿಚಾರದಲ್ಲಿ ಮನನೊಂದಿದ್ದ ತಂದೆ, ತಾಯಿ ಹಾಗೂ ಮಗ ತಡರಾತ್ರಿ ವಿಷಕಾರಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಸ್ಮಶಾನ ಇಲ್ಲದೆ ದಲಿತರ ಸಂಸ್ಕಾರಕ್ಕೆ ಪರದಾಟ- ಪಬ್ಲಿಕ್ ವರದಿ ಬಳಿಕ ಎಚ್ಚೆತ್ತ ಸರ್ಕಾರ

ದಂಪತಿಗೆ ಮೂರು ಜನ ಮಕ್ಕಳಿದ್ದು ಇಬ್ಬರು ಗಂಡು ಮಕ್ಕಳು ಹಾಗೂ ಒಬ್ಬಾಕೆ ಹೆಣ್ಣು ಮಗಳಿದ್ದಳು. ಕಳೆದ ಭಾನುವಾರ ಇದೇ ಗ್ರಾಮದ ನಾರಾಯಣಸ್ವಾಮಿ ಎಂಬಾತನ ಜೊತೆ ಅರ್ಚನಾ ಮನೆ ಬಿಟ್ಟು ಹೋಗಿದ್ದಾಳೆ ಎಂದು ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದೇ ವಿಚಾರದಲ್ಲಿ ತಡರಾತ್ರಿ ಮೊದಲು ದನಗಳ ದೊಡ್ಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ಲಾನ್ ಮಾಡಿದ್ದು ಪ್ಲಾನ್ ಪ್ಲಾಪ್ ಆಗಿ ತದನಂತರ ಮನೆಯ ಮುಂಭಾಗದಲ್ಲಿ ಮೂವರು ವಿಷದ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗ್ಗೆ ಹಿರಿಯ ಮಗ ರಂಜಿತ್ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಚಿಂತಾಮಣಿ ಉಪವಿಭಾಗದ ಎಎಸ್‍ಪಿ ಕುಶಾಲ್ ಚೋಕ್ಸಿ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಡೆತ್‍ನೋಟ್ ಬರೆದು ಆತ್ಮಹತ್ಯೆ ಶರಣಾಗಿದ್ದಾರೆ. ಇದನ್ನೂ ಓದಿ: ಮನೆಯಲ್ಲಿ ಕತ್ತು ಸೀಳಿ ಐಪಿಎಸ್‌ ಅಧಿಕಾರಿ ಹತ್ಯೆ

Live Tv

Leave a Reply

Your email address will not be published. Required fields are marked *

Back to top button