ಚೆನ್ನೈ: ಒಂದೇ ಕುಟುಂಬದ ಐವರು ಕಾರಿನಲ್ಲಿ ಶವವಾಗಿ ಪತ್ತೆಯಾದ ಘಟನೆ ತಮಿಳುನಾಡಿನ (Tamil Nadu) ಪುದುಕೊಟ್ಟೈನಲ್ಲಿ (Pudukkottai) ನಡೆದಿದೆ.
ಬುಧವಾರ ಬೆಳಗ್ಗೆ ತಿರುಚ್ಚಿ-ಕಾರೈಕುಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ನಿಂತಿತ್ತು. ಸಂಜೆಯಾದರೂ ಅದೇ ಸ್ಥಳದಲ್ಲಿ ಕಾರು ನಿಂತಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರೀಶಿಲಿಸಿದಾಗ ಕಾರಿನೊಳಗೆ ಐವರು ಮೃತಪಟ್ಟಿರುವುದು ಕಂಡುಬಂದಿದೆ. ಇದನ್ನೂ ಓದಿ: ಉಸಿರುಗಟ್ಟಿಸಿ ಮಹಾಲಕ್ಷ್ಮಿ ಕೊಲೆ; ಆ್ಯಕ್ಸಲ್ ಬ್ಲೇಡ್‌ನಿಂದ ದೇಹ ಪೀಸ್ – ಹಂತಕನ ಡೆತ್‌ನೋಟ್‌ನಲ್ಲಿ ಕೊಲೆ ರಹಸ್ಯ ರಿವೀಲ್
ಮೃತರನ್ನು ಉದ್ಯಮಿ ಮಣಿಕಂದನ್ (50), ಅವರ ಪತ್ನಿ ನಿತ್ಯ, ತಾಯಿ ಸರೋಜಾ ಮತ್ತು ಅವರ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ. ಮೃತರು ಸೇಲಂ ನಿವಾಸಿಗಳು ಎಂದು ಗುರುತಿಸಲಾಗಿದೆ ಎಂದು ಸ್ಥಳೀಯ ವರದಿಗಳು ತಿಳಿಸಿವೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ವಿಷ ಸೇವಿಸಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಲೆಬನಾನ್‍ಗೆ ಬರಬೇಡಿ – ತನ್ನ ನಾಗರಿಕರಿಗೆ ಭಾರತ ರಾಯಭಾರ ಕಚೇರಿ ಸೂಚನೆ
ಘಟನೆಗೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ಕುಟುಂಬಸ್ಥರು ಸಾಲಗಾರರ ಒತ್ತಡಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದಾ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತ ಮಣಿಕಂದನ್ ಲೋಹದ ವ್ಯಾಪಾರ ಮಾಡುತ್ತಿದ್ದು, ಸಾಲ ಮಾಡಿಕೊಂಡಿದ್ದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಲೋಕಾಯುಕ್ತದಿಂದ ನಿಷ್ಪಕ್ಷಪಾತ ತನಿಖೆ ಅಸಾಧ್ಯ: ದೂರುದಾರ ಸ್ನೇಹಮಯಿ ಕೃಷ್ಣ
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪುದುಕೊಟ್ಟೈ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಮುಂಬೈನಲ್ಲಿ ಭಾರೀ ಮಳೆಗೆ ನಾಲ್ವರು ಸಾವು; ಶಾಲಾ-ಕಾಲೇಜುಗಳಿಗೆ ರಜೆ