ಶಿವಮೊಗ್ಗ: ಕೌಟುಂಬಿಕ ಕಲಹದಿಂದಾಗಿ ಮನನೊಂದ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳಿಗೆ ನೇಣು ಬಿಗಿದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಚೋರಡಿಯಲ್ಲಿ ನಡೆದಿದೆ.
ಮೃತರನ್ನು ಜ್ಯೋತಿ (25), ಸಾನ್ವಿ (3) ಹಾಗೂ ಕುಶಾಲ್ (1) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಭೂಮಿಯಿಂದ ಭೀಕರ ಶಬ್ಧ – ಚಿಕ್ಕಬಳ್ಳಾಪುರದಲ್ಲಿ ಬೆಚ್ಚಿಬಿದ್ದ ಜನ
Advertisement
Advertisement
ಮೃತ ಮಹಿಳೆ ಜ್ಯೋತಿ ಹಾಗೂ ಶಿವಮೂರ್ತಿ ಇಬ್ಬರೂ 5 ವರ್ಷಗಳ ಹಿಂದೆ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಹೆಣ್ಣುಮಕ್ಕಳು, ಒಂದು ಗಂಡು ಮಗು ಇತ್ತು. ಶಿವಮೂರ್ತಿ ಅರಣ್ಯ ಇಲಾಖೆಯಲ್ಲಿ ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದರು. ಆದರೆ ಇತ್ತೀಚೆಗೆ ಕೆಲವು ಸಣ್ಣಪುಟ್ಟ ವಿಷಯಗಳಿಗೆ ಪತಿ-ಪತ್ನಿಯ ನಡುವೆ ಜಗಳ ನಡೆಯುತ್ತಿತ್ತು. ಇದೇ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ 126 ಕೇಸ್ – 103 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್
Advertisement
Advertisement
ಇಂದು ಮಕ್ಕಳೊಂದಿಗೆ ಮನೆಯಲ್ಲೇ ಇದ್ದ ಜ್ಯೋತಿ ಮಕ್ಕಳಿಗೆ ನೇಣು ಬಿಗಿದು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕುಟುಂಬಸ್ಥರು ಮನೆಗೆ ವಾಪಸ್ ಬಂದು ನೋಡಿದಾಗಲೇ ಈ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಕುರಿತು ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂಸಿ ಪೊಲೀಸರು ಶಿವಮೂರ್ತಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.