-ನ.25, 26ರಂದು ಬಸವನಗುಡಿಯಲ್ಲಿ ಪರಿಷೆ, 3 ಲಕ್ಷ ಜನ ಭಾಗಿ ಸಾಧ್ಯತೆ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರಸಿದ್ಧ ಬಸವನಗುಡಿ ಮತ್ತು ಮಲ್ಲೇಶ್ವರಂ ಕಡಲೆಕಾಯಿ ಪರಿಷೆಯ (Kadalekai Parishe) ದಿನಾಂಕವನ್ನ ಮುಜರಾಯಿ ಇಲಾಖೆ (Muzrai Department) ಘೋಷಣೆ ಮಾಡಿದೆ. ಎರಡು ದಿನಗಳ ಕಾಲ ಈ ಪರಿಷೆ ನಡೆಸಲು ನಿರ್ಧರಿಸಿದೆ. ಈ ಬಾರಿಯ ಕಡಲೆಕಾಯಿ ಪರಿಷೆ ಹಲವು ವಿಶೇಷತೆಗಳಿಂದ ಕೂಡಿರಲಿದೆ.
Advertisement
ಪ್ರತಿ ವರ್ಷದಂತೆ ಈ ವರ್ಷವೂ ಬಸವನಗುಡಿ ಕಡಲೆಕಾಯಿ ಪರಿಷೆ ಮಾಡಲು ಮುಜರಾಯಿ ಇಲಾಖೆ ನಿರ್ಧರಿಸಿದೆ. ನವೆಂಬರ್ 25 ಮತ್ತು 26ರಂದು ಎರಡು ದಿನಗಳ ಕಾಲ ಬಸವನಗುಡಿಯಲ್ಲಿ ಕಡಲೆಕಾಯಿ ಪರಿಷೆ ನಡೆಯಲಿದೆ. ಈ ಸಂಬಂಧ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅಧಿಕಾರಿಗಳ ಜೊತೆ ಸಭೆ ಮಾಡಿ ಹಲವಾರು ಸಲಹೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ನಮ್ಮ ಪಕ್ಷದ 50 ಶಾಸಕರಿಗೆ ಬಿಜೆಪಿಯಿಂದ ತಲಾ 50 ಕೋಟಿ ಆಫರ್ ಬಂದಿತ್ತು: ಸಿಎಂ ಬಾಂಬ್
Advertisement
Advertisement
ಇನ್ನೂ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ನವೆಂಬರ್ 15 ರಿಂದ 3 ದಿನಗಳ ಕಾಲ ನಡೆಯಲಿದೆ. ಪರಿಷೆಯನ್ನು ಪ್ಲಾಸ್ಟಿಕ್ ಮುಕ್ತವಾಗಿ ಮಾಡಲು ನಿರ್ಧರಿಸಲಾಗಿದೆ. ಪರಿಷೆಗೆ ಬರುವವರು ಮತ್ತು ವ್ಯಾಪಾರಸ್ಥರು ಪ್ಲಾಸ್ಟಿಕ್ ಬಿಟ್ಟು, ಬಟ್ಟೆ ಚೀಲವನ್ನೆ ಬಳಸಬೇಕು ಎಂಬ ನಿಯಮ ಜಾರಿ ಮಾಡಲಾಗುತ್ತದೆ. ಇನ್ನು ಈ ಪರಿಷೆಯಲ್ಲಿ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ನಡೆಯಲಿವೆ. ಈ ಬಾರಿ ಮೂರು ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ: ರಝಾಕರು ಮುಸ್ಲಿಮರಲ್ಲ, ಸುಟ್ಟಿದ್ದು ನಮ್ಮನೆ, ಹೋಗಿದ್ದು ನಮ್ಮವರ ಜೀವ, ಯೋಗಿಗೆ ಏನಾಗಬೇಕು? – ಪ್ರಿಯಾಂಕ್ ತಿರುಗೇಟು
Advertisement
ಕಳೆದ ಬಾರಿ ಕಡಲೆಕಾಯಿ ಪರಿಷೆಯಲ್ಲಿ ವ್ಯಾಪಾರಸ್ಥರಿಂದ ಸುಂಕ ವಸೂಲಿ ಮಾಡಿರೋ ಆರೋಪ ಎದ್ದಿತ್ತು. ಹೀಗಾಗಿ ಈ ಬಾರಿ ಆ ರೀತಿ ಅಕ್ರಮಗಳು ನಡೆಯದಂತೆ ಕ್ರಮವಹಿಸಿ ಯಶಸ್ವಿಗೊಳಿಸಲು ಪ್ಲ್ಯಾನ್ ಮಾಡಲಾಗಿದೆ. ಇದನ್ನೂ ಓದಿ: ಗುರುವಾರ ಬಿಎಸ್‌ವೈ, ರಾಮುಲುಗೆ ಬಿಗ್ ಡೇ!