ಬಿಟೌನ್ ನ (Bollywood) ಖ್ಯಾತ ನಟ ಹಾಗೂ ನಿರ್ದೇಶಕ ಸತೀಶ್ ಕೌಶಿಕ್ (Satish Kaushik) ಹೃದಯಾಘಾತದಿಂದ ನಿಧನರಾಗಿದ್ದಾರೆ (passes away). ಸತೀಶ್ ಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ದೆಹಲಿಯ ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸತೀಶ್ ನಿಧನ ಹೊಂದಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಅವರ ಅಂತ್ಯ ಸಂಸ್ಕಾರವನ್ನು ಯಾರಿ ರಸ್ತೆಯ ಮುಂಬೈನ ವರ್ಸೋವಾದಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.
ಸತೀಶ್ ನಿಧನದ ಸುದ್ದಿಯನ್ನು ಖ್ಯಾತ ನಟ ಅನುಪಮ್ ಖೇರ್ ಟ್ವೀಟ್ ಮಾಡಿ, ಸಂತಾಪವನ್ನು ವ್ಯಕ್ತ ಪಡಿಸಿದ್ದಾರೆ. ಅವರೊಂದಿಗೆ ಕೆಲಸ ಮಾಡಿದ್ದನ್ನೂ ನೆನಪಿಸಿಕೊಂಡಿದ್ದಾರೆ. ಕಂಗನಾ ರಣಾವತ್ ನಿರ್ದೇಶನದ ಎಮರ್ಜೆನ್ಸಿ ಸಿನಿಮಾದಲ್ಲಿ ಸತೀಶ್ ನಟಿಸುತ್ತಿದ್ದರು. ಈ ಸಿನಿಮಾದಲ್ಲಿ ಅನುಪಮ್ ಖೇರ್ ಕೂಡ ಪ್ರಮುಖ ಪಾತ್ರಲ್ಲಿ ನಟಿಸಿದ್ದಾರೆ. ಇದನ್ನೂ ಓದಿ: ಅವಳಿ ಮಕ್ಕಳೊಂದಿಗೆ ರಸ್ತೆಗಿಳಿದ ನಯನತಾರಾ ದಂಪತಿ
ಹಲವಾರು ಸಿನಿಮಾಗಳಲ್ಲಿ ನಟಿಸಿರುವ ಸತೀಶ್, ನಟನೆಯ ಜೊತೆಗೆ ನಿರ್ದೇಶನವನ್ನೂ ಮಾಡಿದ್ದರು. ಅಲ್ಲದೇ, ಖ್ಯಾತ ನಟರ ಜೊತೆ ತೆರೆಹಂಚಿಕೊಂಡಿದ್ದು ವಿಶೇಷ. ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಹಲವರು ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದ್ದಾರೆ.