ಬಾಲಿವುಡ್ ಖ್ಯಾತ ನಟ ಆಯುಷ್ಮಾನ್ ಖುರಾನಾ (Ayushmann Khurran) ಅವರ ತಂದೆ ಪಿ. ಖುರಾನಾ (P. Khurran) ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಪಂಜಾಬ್ (Punjab) ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳಿಂದ ಅವರು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಪಿ.ಖುರಾನಾ ಮೃತಪಟ್ಟಿದ್ದಾರೆ
Advertisement
ಆಯುಷ್ಮಾನ್ ಮತ್ತು ಅಪರಶಕ್ತಿ ಇಬ್ಬರು ಮಕ್ಕಳು ಮತ್ತು ಪತ್ನಿಯನ್ನು ಅವರು ಅಗಲಿದ್ದಾರೆ. ನಿಧನದ (Passed Away) ಸುದ್ದಿಯನ್ನು ಅಪರಶಕ್ತಿ ಅವರ ವಕ್ತಾರರು ಖಚಿತ ಪಡಿಸಿದ್ದು, ಖುರಾನಾ ಕುಟುಂಬ ದುಃಖದಲ್ಲಿದೆ. ಅವರ ಅಗಲಿಕೆಯ ನೋವನ್ನು ಭರಿಸುವಂತಹ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದಿದ್ದಾರೆ. ಇದನ್ನೂ ಓದಿ:ಕಾಲೆಳೆದ ನಟಿಗೆ ಸ್ನೇಹದ ಹಸ್ತಚಾಚಿದ ರಶ್ಮಿಕಾ ಮಂದಣ್ಣ
Advertisement
Advertisement
ಪಿ. ಖುರಾನಾ ಪ್ರಸಿದ್ಧ ಜ್ಯೋತಿಷಿಯಾಗಿದ್ದು, ಜ್ಯೋತಿಷ್ಯ ಶಾಸ್ತ್ರದಲ್ಲಿ ಅಪಾರ ಪಾಂಡಿತ್ಯವನ್ನು ಹೊಂದಿದ್ದರು. ಈ ಕುರಿತಾಗಿ ಅವರು ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. ಮಗನು ಸಿನಿಮಾ ರಂಗದಲ್ಲಿ ತೊಡಗಿಕೊಳ್ಳಲು ಇವರೇ ಕಾರಣ. ತಂದೆಯ ಆಸೆಯಂತೆಯೇ ಆಯುಷ್ಮಾನ್ ಬಾಲಿವುಡ್ ಗೆ ಎಂಟ್ರಿ ಕೊಟ್ಟು ಹಲವಾರು ಸಿನಿಮಾಗಳನ್ನು ಮಾಡಿದ್ದಾರೆ.