ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬಾಲಿವುಡ್ (Bollywood) ನ ಹಿರಿಯ ನಟಿ ಸುಲೋಚನಾ ಲಾತ್ಕರ್ (Sulochana Latkar) ನಿಧನರಾಗಿದ್ದಾರೆ. ಮುಂಬೈನ ಶುಶ್ರೂಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ (Passed Away). ಇಂದು ಸಂಜೆ 5.30ಕ್ಕೆ ದಾದರ್ ಸ್ಮಶಾನದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
250ಕ್ಕೂ ಹೆಚ್ಚು ಹಿಂದಿ ಸಿನಿಮಾಗಳಲ್ಲಿ ನಟಿಸಿದ್ದ ಸುಲೋಚನಾ, ಹಿಂದಿಯ ಜೊತೆ ಜೊತೆಗೆ ಮರಾಠಿ (Marathi) ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ. 1940ರಲ್ಲಿ ಮರಾಠಿ ಸಿನಿಮಾಗಳ ಮೂಲಕ ಚಿತ್ರೋದ್ಯಮಕ್ಕೆ ಕಾಲಿಟ್ಟ ಅವರು ನಂತರದ ದಿನಗಳಲ್ಲಿ ಹಿಂದಿ ಚಿತ್ರಗಳಲ್ಲೂ ನಟಿಸಿದರು. 50ಕ್ಕೂ ಹೆಚ್ಚು ಮರಾಠಿ ಚಿತ್ರಗಳಲ್ಲಿ ನಟಿಸಿರುವ ಹೆಗ್ಗಳಿಕೆ ಇವರದ್ದು. ಇದನ್ನೂ ಓದಿ:ಕತಾರ್ ಕನ್ನಡಿಗರನ್ನು ರಂಜಿಸಿದ ‘ಚೌಕಬಾರ’ ಸಿನಿಮಾ
ಬಾಲಿವುಡ್ ದಿಗ್ಗಜರಾದ ಶಮ್ಮಿ ಕಪೂರ್, ದಿಲೀಪ್ ಕುಮಾರ್, ದೇವಾನಂದ್ ಸೇರಿದಂತೆ ಹಲವರ ಜೊತೆ ತೆರೆ ಹಂಚಿಕೊಂಡಿದ್ದಾರೆ. ದಿಲ್ ದೇಖೆ ದೇಖೋ, ಆದ್ಮಿ, ಜಾನಿ ಮೇರಾ ನಾಮ್, ಸಂಗ್ತಿ ಐಕಾ, ಪತಿವ್ರತಾ, ಜೀವಚಾ ಸಖಾ ಸೇರಿದಂತೆ ಹಲವಾರು ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ ಸುಲೋಚನಾ.
ಸಿನಿಮಾ ರಂಗಕ್ಕೆ ಇವರು ಸಲ್ಲಿಸಿದ ಸೇವೆಗಾಗಿ 1999ರಲ್ಲಿ ಭಾರತ ಸರಕಾರವು ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಹಾರಾಷ್ಟ್ರ ಸರಕಾರವು ಮಹಾರಾಷ್ಟ್ರ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಜೀವಮಾನ ಸಾಧನೆಗಾಗಿ ಫಿಲ್ಮ್ ಫೇರ್ ಪ್ರಶಸ್ತಿಯನ್ನು ಇವರು ಪಡೆದುಕೊಂಡಿದ್ದಾರೆ.