ಕರಾವಳಿಯ ಖ್ಯಾತ ಪತ್ರಕರ್ತ ಮನೋಹರ್ ಪ್ರಸಾದ್ ಇನ್ನಿಲ್ಲ

Public TV
1 Min Read
MANOHAR PRASAD

ಮಂಗಳೂರು: ಕರಾವಳಿಯ ಖ್ಯಾತ ಪತ್ರಕರ್ತ ಮನೋಹರ್ ಪ್ರಸಾದ್ (64) ನಿಧನರಾಗಿದ್ದಾರೆ.

ಉದಯವಾಣಿ ಪತ್ರಿಕೆಯಲ್ಲಿ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದ ಮನೋಹರ್ ಪ್ರಸಾದ್, ಬಳಿಕ ಮುಖ್ಯ ವರದಿಗಾರರಾಗಿ, ಬ್ಯುರೋ ಚೀಫ್ ಜೊತೆಗೆ ಸಹಾಯಕ ಸಂಪಾಕರಾಗಿಯೂ ಕಾರ್ಯ ನಿರ್ವಹಿಸುವ ಮೂಲಕ ಸುಮಾರು 36 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.

ಮನೋಹರ ಪ್ರಸಾದ್ ತಮ್ಮ ಸಾಧನೆ ಹಾಗೂ ಸೇವೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಸಂದೇಶ ಪ್ರತಿಷ್ಠಾನದ ಪ್ರಶಸ್ತಿ ಪಡೆದಿದ್ದಾರೆ.  ಇದನ್ನೂ ಓದಿ: ನನ್ನ ತಮ್ಮನನ್ನು ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾರೆ: ಮೃತ ಬಿಜೆಪಿ ಮುಖಂಡನ ಸಹೋದರ ಆರೋಪ

ಕಳೆದ ಎರಡು ವರ್ಷಗಳ ಹಿಂದೆ ಸೇವೆಯಿಂದ ನಿವೃತ್ತಿಗೊಂಡಿದ್ದರು. ಬಳಿಕ ಅವರು ಅನಾರೋಗ್ಯಕ್ಕೀಡಾಗಿದ್ದರು. ಇಂದು ಮುಂಜಾನೆ ಮಂಗಳೂರಿನಲ್ಲಿ ನಿಧನರಾಗಿದ್ದಾರೆ.

Share This Article