ಬಾಲಿವುಡ್ ಖ್ಯಾತ ಕಾಮಿಡಿಯನ್, ಸ್ಟ್ಯಾಂಡಪ್ ಕಾಮಿಡಿ ಮೂಲಕ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿರುವ ರಾಜು ಶ್ರೀವಾತ್ಸವ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ ಎನ್ನಲಾಗುತ್ತಿದೆ. ದಿನದಿಂದ ದಿನಕ್ಕೆ ಅವರು ಆರೋಗ್ಯ ಸ್ಥಿತಿ ಇಳಿಮುಖದತ್ತ ಹೆಜ್ಜೆ ಹಾಕುತ್ತಿದ್ದು, ಇದೀಗ ಗಂಭೀರ ಸ್ಥಿತಿಯಲ್ಲಿ ಅವರು ಇದ್ದಾರೆ ಎನ್ನಲಾಗುತ್ತಿದೆ. ಅವರು ಬದುಕುಳಿಯಲು ಪವಾಡವೇ ನಡೆಯಬೇಕು ಎನ್ನುವ ಮಾತು ಕೇಳಿ ಬರುತ್ತಿದೆ.
ಆಗಸ್ಟ್ 10 ರಂದು ರಾಜು ಅವರು ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಒಂದು ವಾರದಿಂದ ದೆಹಲಿ ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜು ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಇಲ್ಲ ಎಂದು ಹೇಳಲಾಗುತ್ತಿದೆ. ಈಗಾಗಲೇ ಮೆದುಳು ತನ್ನ ಕೆಲಸವನ್ನು ನಿಲ್ಲಿಸಿದೆ ಎನ್ನುತ್ತವೆ ಮೂಲಗಳು. ಆದರೂ, ವೈದ್ಯರು ತಮ್ಮ ಕೆಲಸವನ್ನು ಮುಂದುವರೆಸಿದ್ದಾರಂತೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ಆರ್ಯವರ್ಧನ್ ಗುರೂಜಿ
ಬಾಜಿಗರ್, ಬಾಂಬೆ ಟು ಗೋವಾ, ಮೈನೆ ಪ್ಯಾರ್ ಕಿಯಾ ಸೇರಿದಂತೆ ಸಾಕಷ್ಟು ಹಿಂದಿ ಚಿತ್ರಗಳಲ್ಲಿ ಹಾಸ್ಯ ಕಲಾವಿದರಾಗಿ ನಟಿಸಿರುವ ರಾಜು, ತಮ್ಮದೇ ಆದ ಮ್ಯಾನರಿಸಂ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಕೇವಲ ಸಿನಿಮಾಗಳಲ್ಲಿ ಮಾತ್ರವಲ್ಲ, ಸ್ಟ್ಯಾಂಡ್ ಅಪ್ ಕಾಮಿಡಿಯನ್ ಆಗಿ ನಗಿಸಿದ್ದಾರೆ. ಅಲ್ಲದೇ, ಹಿಂದಿ ಬಿಗ್ ಬಾಸ್ ಶೋ ಗೂ ಇವರು ಸ್ಪರ್ಧಿಯಾಗಿ ಹೋಗಿದ್ದರು. ನೂರಾರು ಸಿನಿಮಾಗಳಲ್ಲಿ ನಟಿಸಿರುವ ರಾಜು, ಬೇಗ ಗುಣಮುಖರಾಗಿ ಬರಲಿ ಎನ್ನುವುದು ಅವರ ಅಭಿಮಾನಿಗಳ ಆಸೆ.