ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಲೋಕೇಶ್ ಕನಗರಾಜು (Lokesh Kanagaraj), ಇದೀಗ ತಮ್ಮ ಮತ್ತೊಂದು ಕನಸನ್ನು ಈಡೇರಿಸಿಕೊಳ್ಳುತ್ತಿದ್ದಾರೆ. ಈವರೆಗೂ ಬೇರೆ ಬೇರೆ ನಿರ್ಮಾಣ ಸಂಸ್ಥೆಗಳಲ್ಲಿ ಕೆಲಸ ಮಾಡಿರುವ ಲೋಕೇಶ್, ಇದೀಗ ತಮ್ಮದೇ ಪ್ರೊಡಕ್ಷನ್ ಹೌಸ್ (Production House)ರು ಮಾಡಿದ್ದು, ಝೀ ಸ್ಕ್ಯಾಡ್ ಎಂದು ಅದಕ್ಕೆ ಹೆಸರಿಟ್ಟಿದ್ದಾರೆ. ಈ ಸಂಸ್ಥೆಯ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವುದಾಗಿ ಅವರು ತಿಳಿಸಿದ್ದಾರೆ.
Advertisement
ಸದ್ಯ ಲೋಕೇಶ್ ಅವರು ರಜನಿಕಾಂತ್ ಸಿನಿಮಾದ ತಯಾರಿಯಲ್ಲಿದ್ದು, ಈ ಚಿತ್ರದ ಬಗ್ಗೆ ಈಗಾಗಲೇ ಸಾಕಷ್ಟು ಕುತೂಹಲ ಮೂಡಿದೆ. ಇದು ರಜನಿಕಾಂತ್ (Rajinikanth) ನಟನೆಯ 171ನೇ ಸಿನಿಮಾವಾಗಿದ್ದು, ಭಾರೀ ಭಾರೀ ಸುದ್ದಿಗಳು ಹೊರ ಬರುತ್ತಿವೆ. ಅದರಲ್ಲೂ ತಾರಾಗಣದ ಕುರಿತಂತೆ ರೋಚಕ ವಿಷಯಗಳು ಕೇಳುತ್ತಿವೆ. ಅವುಗಳು ನಿಜವೋ ಸುಳ್ಳೋ ಗೊತ್ತಿಲ್ಲ. ಒಟ್ಟಿನಲ್ಲಿ ಥ್ರಿಲ್ ಅನುಭವಿಸುತ್ತಿದ್ದಾರೆ ರಜನಿ ಫ್ಯಾನ್ಸ್. ಇದೀಗ ಮತ್ತೊಂದು ಹೊಸ ಸುದ್ದಿ ಹರಿದಾಡುತ್ತಿದ್ದು ರಜನಿ ಜೊತೆ ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟ್ಟಿ (Mammootty) ಕೂಡ ಪಾತ್ರ ಮಾಡಲಿದ್ದಾರೆ.
Advertisement
Advertisement
‘ಜೈಲರ್’ (Jailer) ಸಿನಿಮಾದ ಭರ್ಜರಿ ಸಕ್ಸಸ್ ನಂತರ ರಜನಿಕಾಂತ್ ಸಿನಿಮಾ ಆಯ್ಕೆಯಲ್ಲಿ ಮತ್ತಷ್ಟು ಚ್ಯುಸಿಯಾಗಿದ್ದಾರೆ. ಹೀಗಿರುವಾಗ ತಮ್ಮ 171ನೇ ಚಿತ್ರಕ್ಕೆ ಲೋಕೇಶ್ ಕನಗರಾಜ್ ಜೊತೆ ಕೈಜೋಡಿಸಿದ್ದಾರೆ. ತಲೈವಾ ಮುಂದೆ ಅಬ್ಬರಿಸಲು ನಟ ರಾಘವ್ ಲಾರೆನ್ಸ್ ಕೂಡ ಸಜ್ಜಾಗಿದ್ದಾರೆ.
Advertisement
ರಜನಿಕಾಂತ್ ಅವರ 171ನೇ ಚಿತ್ರದಲ್ಲಿ ವಿಲನ್‌ಗೂ ಕೂಡ ತೂಕವಾಗಿರುವಂತಹ ಪಾತ್ರವಿದ್ದು, ತಲೈವಾ ಮುಂದೆ ಅಬ್ಬರಿಸೋಕೆ ರಾಘವ್ ಸೂಕ್ತ ಎಂದೇನಿಸಿ ನಿರ್ದೇಶಕರು ಆಯ್ಕೆ ಮಾಡಿದ್ದಾರೆ. ಹಾಗಾಗಿ ರಾಘವ್ ವಿಶೇಷ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುತ್ತಿವೆ ಮೂಲಗಳು.
ರಜನಿಕಾಂತ್ 171ನೇ ಸಿನಿಮಾ, ಲೋಕೇಶ್ ಕನಗರಾಜ್ ಅವರ 6ನೇ ಸಿನಿಮಾ ಆಗಲಿದೆ. ರಜನೀಕಾಂತ್‌ಗೆ ನಿರ್ದೇಶಿಸಲಿರುವ ಮೊದಲ ಸಿನಿಮಾ ಇದಾಗಿದ್ದು, ರಾಘವ್ ಲಾರೆನ್ಸ್-ತಲೈವಾ ಮೊದಲ ಬಾರಿಗೆ ಜೊತೆಯಾಗಿ ನಟಿಸಲಿದ್ದಾರೆ. ಸಿನಿಮಾದ ಚಿತ್ರೀಕರಣ ಮುಂದಿನ ವರ್ಷ ಮಾರ್ಚ್ ತಿಂಗಳಲ್ಲಿ ಪ್ರಾರಂಭ ಆಗಲಿದೆ.