ಭಾರತ ಸಿನಿಮಾ ರಂಗದ ಖ್ಯಾತ ನಿರ್ದೇಶಕ, ರಾಷ್ಟ್ರ ಪ್ರಶಸ್ತಿ ವಿಜೇತ ಶ್ಯಾಮ್ ಬೆನಗಲ್ (Shyam Benegal) ಆರೋಗ್ಯ (Health) ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಎರಡೂ ಕಿಡ್ನಿ ಫೇಲ್ (Kidney) ಆಗಿರುವ ಹಿನ್ನೆಲೆಯಲ್ಲಿ ಅವರಿಗೆ ನಿರಂತರವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆಯಲ್ಲೇ ಅವರು ಡಯಾಲಿಸಿಸ್ ಗೆ (Dialysis) ಒಳಗಾಗಿದ್ದು, ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ ಎಂದು ಅವರ ಕಛೇರಿ ಸಿಬ್ಬಂದಿ ತಿಳಿಸಿದ್ದಾರೆ ಎಂದು ವರದಿ ಮಾಡಿದೆ.
ಭಾರತ ಸಿನಿಮಾ ರಂಗ ಕಂಡ ಅತ್ಯಂತ ಪ್ರತಿಭಾವಂತ ಮತ್ತು ವಿಶೇಷ ಸಿನಿಮಾಗಳನ್ನು ನೀಡಿದ ನಿರ್ದೇಶಕರು. ಎಂಟು ರಾಷ್ಟ್ರ ಪ್ರಶಸ್ತಿಗಳನ್ನು ಇವರ ಚಿತ್ರಗಳು ಪಡೆದುಕೊಂಡಿವೆ. ಅಲ್ಲದೇ, ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮಶ್ರೀ, ಪದ್ಮಭೂಷಣವನ್ನೂ ಪಡೆದಿದ್ದಾರೆ. ಸಿನಿಮಾ ರಂಗಕ್ಕೆ ಸಲ್ಲಿಸಿದ ಸೇವೆಗಾಗಿ ಭಾರತ ಸರಕಾರವು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು 2005ರಲ್ಲೇ ನೀಡಿ ಗೌರವಿಸಿದೆ. ಇದನ್ನೂ ಓದಿ: ರಿಷಬ್ ಶೆಟ್ಟಿ ಮಗಳ ಬರ್ತ್ಡೇ ಸಂಭ್ರಮದಲ್ಲಿ ಸ್ಯಾಂಡಲ್ವುಡ್ ತಾರೆಯರು
ಶಬಾನಾ ಅಜ್ಮಿ ಮತ್ತು ಅನಂತ್ ನಾಗ್ ಕಾಂಬಿನೇಷನ್ ನ ಅಂಕುರ್ ಇವರ ಮೊದಲ ಸಿನಿಮಾ. ಆನಂತರ ಮಥಣ್, ಭೂಮಿಕಾ: ದಿ ರೋಲ್, ವೆಲ್ ಡನ್ ಅಬ್ಬಾ, ಆರೋಹನ್, ನೇತಾಜಿ ಸುಭಾಸ್ ಚಂದ್ರ ಬೋಸ್ ಸೇರಿದಂತೆ ಸಾಕಷ್ಟು ಚಿತ್ರಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. ಇವರ ಗರಡಿಯಲ್ಲಿ ಪಳಗಿದ ಅನೇಕ ಕಲಾವಿದರು ಸೂಪರ್ ಸ್ಟಾರ್ ಆಗಿ ಮಿಂಚಿದ್ದಾರೆ. ಸ್ಟಾರ್ ಗಳನ್ನು ತಯಾರಿಸಿದ ಅಪರೂಪದ ನಿರ್ದೇಶಕರು ಕೂಡ ಇವರಾಗಿದ್ದಾರೆ.