Saturday, 24th August 2019

ನಿಖಿಲ್ ಸೋತಿದ್ದಕ್ಕೆ ಬೆರಳನ್ನೇ ಕತ್ತರಿಸಿಕೊಂಡ ಅಭಿಮಾನಿ?

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಕ್ಕೆ ಅಭಿಮಾನಿಯೊಬ್ಬ ತನ್ನ ಬೆರಳನ್ನು ಕತ್ತರಿಸಿಕೊಂಡಿದ್ದಾನೆ.

ಜಿಲ್ಲೆಯ ಮದ್ದೂರು ತಾಲೂಕಿನ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ನಿಖಿಲ್ ಸೋತಿದ್ದಕ್ಕೆ ಅಭಿಮಾನಿ ಮತದಾನ ಮಾಡಿದ ನಂತರ ಕೈಗೆ ಶಾಯಿ ಹಾಕಿಸಿಕೊಂಡಿದ್ದ ಬೆರಳನ್ನೇ ಕತ್ತರಿಸಿಕೊಂಡಿದ್ದಾನೆ ಎಂದು ಹೇಳಲಾಗುತ್ತದೆ.

ಸಾಮಾಜಿಕ ಜಾಲತಾಣದಲ್ಲಿ ಬೆರಳು ಕತ್ತರಿಸಿಕೊಂಡಿದ್ದ ಫೋಟೋ ಹರಿದಾಡುತ್ತಿದೆ. ನಿಖಿಲ್ ಸೋತ ಮೇಲೆ ಅವರಿಗೆ ಮತ ಹಾಕಿ ಶಾಹಿ ಹಾಕಿಸಿಕೊಂಡ ಬೆರಳು ಇರಬಾರದೆಂದು ಕತ್ತರಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಚುನಾವಣೆಯಲ್ಲಿ ನಿಖಿಲ್ ಅವರಿಗೆ 5,71,777 ಮತ ಲಭಿಸಿದ್ದರೆ, ಸುಮಲತಾ ಅವರಿಗೆ 6,98,213 ಮತ ಲಭಿಸಿದೆ. ಆ ಮೂಲಕ ಸುಮಲತಾ ಅವರು ಬರೋಬ್ಬರಿ 1,26,436 ಮತಗಳ ಅಂತರದಿಂದ ಗೆಲುವು ಪಡೆದಿದ್ದಾರೆ.

Leave a Reply

Your email address will not be published. Required fields are marked *