ಬೀದರ್: ಕೆಜಿಎಫ್ ಚಿತ್ರ ಬಿಡುಗಡೆ ಆಗಿರುವ ಖುಷಿಯಲ್ಲಿ ಯಶ್ ಅಭಿಮಾನಿ ಬಳಗದವರು ರಾಕಿಂಗ್ ಸ್ಟಾರ್ ಯಶ್ ಅವರ ರಗಡ್ ಲುಕ್‍ನಲ್ಲಿರುವ ಭಾವಚಿತ್ರವನ್ನು ರಂಗೋಲಿಯಲ್ಲಿ ಬಿಡಿಸಿ ಅವರ ಸಿನಿಮಾಕ್ಕೆ ಶುಭ ಕೋರಿದ್ದಾರೆ.
ಇಂದು ದೇಶಾದ್ಯಂತ ಅದ್ಧೂರಿಯಾಗಿ ರಾಕಿಂಗ್ ಸ್ಟಾರ್ ಯಶ್ ಅವರ ಕೆಜಿಎಫ್ ಚಿತ್ರ ಬಿಡುಗಡೆ ಆಗಿದೆ. ಆದ್ದರಿಂದ ಯಶ್ ಅಭಿಮಾನಿಗಳ ಬಳಗದವರು ಸ್ವಪ್ನಾ ಮಲ್ಟಿಪ್ಲೆಕ್ಸ್ ಥಿಯೇಟರ್ ನಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಭಾವಚಿತ್ರವನ್ನು ರಂಗೋಲಿಯಲ್ಲಿ ಬಿಡಿಸಿ ಅವರ ಸಿನಿಮಾಕ್ಕೆ ಶುಭ ಕೋರಿದ್ದಾರೆ. ಮಹೇಶ್ವರಿ ಪಾಂಚಾಲ ಎಂಬವರು ರಂಗೋಲಿಯಲ್ಲಿ ಯಶ್ ಅವರ ಈ ಚಿತ್ರ ಬಿಡಿಸಿದ್ದು ಜಿಲ್ಲೆಯ ಅಭಿಮಾನಿಗಳ ಗಮನ ಸೆಳೆಯತ್ತಿದ್ದಾರೆ.
ಪಂಚ ಭಾಷೆಗಳಲ್ಲಿ ತೆರೆ ಕಂಡಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕನ್ನಡದ ಬಹು ನಿರೀಕ್ಷಿತ ಕೆಜಿಎಫ್ ಚಿತ್ರ ಎಲ್ಲೆಡೆ ಸಕ್ಕತ್ ಸೌಂಡ್ ಮಾಡುತ್ತಿದೆ. ಗಡಿ ಜಿಲ್ಲೆ ಬೀದರ್ನಲ್ಲಿ ಮೊದಲ ಶೋ ಪ್ರಾರಂಭವಾಗಿದ್ದು, ಸಿನಿಪ್ರಿಯರಲ್ಲಿ ಕೆಜಿಎಫ್ ಸಿಕ್ಕಾಪಟ್ಟೆ ಕ್ರೇಜ್ ಹುಟ್ಟುಹಾಕಿದೆ.
ಈಗಾಗಲೇ ದೇಶಾದ್ಯಂತ ಕೆಜಿಎಫ್ ಮೊದಲ ಶೋ ಪ್ರಾರಂಭವಾಗಿದ್ದು ಯಶ್ ಅಭಿಮಾನಿಗಳು ಕೇಕ್ ಕಟ್ ಮಾಡಿ, ಪಟಾಕಿ ಸಿಡಿಸಿ, ಕುಂಬಳಕಾಯಿ ಒಡೆದು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಸದ್ಯ ಯಶ್ ಅವರ ಕೆಜಿಎಫ್ ಸಿನಿಮಾಕ್ಕೆ ಅಭಿಮಾನಿಗಳು ಫಿದಾ ಆಗಿದ್ದು ಚಿತ್ರ ಸೂಪರ್ ಆಗಿದೆ ಎಂದು ಸಿನಿಮಾ ನೋಡಿದವರು ಪ್ರತಿಕ್ರಿಯಿಸಿದ್ದಾರೆ. ಅಷ್ಟೇ ಅಲ್ಲದೆ ಕೆಜಿಎಫ್ ಚಿತ್ರದ ಅಬ್ಬರಕ್ಕೆ ಕನ್ನಡ ಸಿನಿಪ್ರಿಯರು ಮನಸೋತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv