Connect with us

Bengaluru City

ಶುರುವಾಯ್ತು ನಟಸಾರ್ವಭೌಮನ ಆರ್ಭಟ – ಅಭಿಮಾನಿಗಳಿಂದ ಭರ್ಜರಿ ಸ್ವಾಗತ

Published

on

ಬೆಂಗಳೂರು: ಸ್ಯಾಂಡಲ್‍ವುಡ್ ಬಹುನಿರೀಕ್ಷೆಯ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ನಟಸಾರ್ವಭೌಮ’ ಚಿತ್ರ ಬಿಡುಗಡೆ ಆಗಿದ್ದು, ಸಿನಿಮಾದ ಆರ್ಭಟ ಈಗಾಗಲೇ ಶುರುವಾಗಿದೆ.

ಬೆಂಗಳೂರಿನ ಮಾಗಡಿ ರಸ್ತೆಯ ಪ್ರಸನ್ನ ಚಿತ್ರಮಂದಿರದಲ್ಲಿ ಬುಧವಾರ ರಾತ್ರಿ 10 ಗಂಟೆಗೆ ಫಸ್ಟ್ ಶೋ ನಡೆದಿದೆ. ಅಭಿಮಾನಿಗಳು ನಟಸಾರ್ವಭೌಮ ಚಿತ್ರವನ್ನು ಭರ್ಜರಿಯಾಗಿ ಸ್ವಾಗತ ಮಾಡಿಕೊಂಡಿದ್ದಾರೆ. ಅಲ್ಲದೆ ಚಿತ್ರದ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಥೀಯೇಟರ್ ಗೆ ಭೇಟಿ ನೀಡಿ ಚಿತ್ರ ವೀಕ್ಷಿಸಿದ್ದಾರೆ.

ಒಟ್ಟು 500ಕ್ಕೂ ಹೆಚ್ಚಿನ ಸ್ಕ್ರೀನ್‍ಗಳಲ್ಲಿ ನಟಸಾರ್ವಭೌಮ ರಿಲೀಸ್ ಆಗಿದ್ದು, ಹೌಸ್‍ಫುಲ್ ಪ್ರದರ್ಶನ ಕಾಣುತ್ತಿದೆ. ನಟಸಾರ್ವಭೌಮ ಚಿತ್ರ 2 ಚಿತ್ರಮಂದಿರಗಳಲ್ಲಿ 24 ಗಂಟೆಗಳ ಪ್ರದರ್ಶನ ಕಾಣಲಿದೆ. ಬೆಂಗಳೂರಿನ ಊರ್ವಶಿ ಮತ್ತು ಗೌಡನಪಾಳ್ಯದ ಶ್ರೀನಿವಾಸ ಚಿತ್ರಮಂದಿರದಲ್ಲಿ ಒಂದೇ ದಿನದಲ್ಲಿ 8 ಬಾರಿ ಸಿನಿಮಾ ಪ್ರದರ್ಶನ ಕಾಣುವ ಮೂಲಕ ಹೊಸ ದಾಖಲೆಗೆ ಮುಂದಾಗಿದೆ. ಇದನ್ನೂ ಓದಿ: ನೆಚ್ಚಿನ ನಟನ ಸಿನಿಮಾ ನೋಡಲು ರಜೆ ಪತ್ರ ಬರೆದ ವಿದ್ಯಾರ್ಥಿನಿ

ನಟಸಾರ್ವಭೌಮ ಚಿತ್ರ ಕ್ರೇಜ್ ರಾಜ್ಯಾದ್ಯಂತ ಹೆಚ್ಚಾಗಿದೆ. ತಮ್ಮ ನೆಚ್ಚಿನ ನಟನ ಸಿನಿಮಾ ಫಸ್ಟ್ ಶೋ ವೀಕ್ಷಿಸಲು ಅಭಿಮಾನಿಗಳು ರಜೆ ಕೋರಿ ಪತ್ರ ಬರೆದಿದ್ದಾರೆ. ಮೈಸೂರಿನ ಕಾಲೇಜಿನ ವಿದ್ಯಾರ್ಥಿನಿ ಚಿತ್ರ ವೀಕ್ಷಿಸಲು ರಜೆ ಕೋರಿ ಪತ್ರ ಬರೆದರೆ, ಬಾಗಲಕೋಟೆಯಲ್ಲಿ ಗ್ರಾಮ ಪಂಚಾಯ್ತು ನೌಕರ ಕೂಡ ರಜೆ ಕೋರಿ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಸಿನಿಮಾ ನೋಡಲು ರಜೆ ಕೇಳಿದ ಮೈಸೂರು ವಿದ್ಯಾರ್ಥಿನಿಗೆ ಪುನೀತ್ ಸಲಹೆ

ನಟಸಾರ್ವಭೌಮ ಚಿತ್ರದಲ್ಲಿ ಪುನೀತ್ ರಾಜ್‍ಕುಮಾರ್ ಜೊತೆ ಡಿಂಪಲ್ ಬೆಡಗಿ ರಚಿತಾ ರಾಮ್, ಅನುಪಮಾ ಪರಮೇಶ್ವರ್, ಸಾಧುಕೋಕಿಲಾ, ಬಿ. ಸರೋಜಾ ದೇವಿ, ಚಿಕ್ಕಣ್ಣ, ರವಿಶಂಕರ್ ನಟಿಸಿದ್ದಾರೆ. ಈ ಚಿತ್ರವನ್ನು ರಾಕ್‍ಲೈನ್ ವೆಂಕಟೇಶ್ ಅವರು ನಿರ್ಮಿಸಿದ್ದು, ಪವನ್ ಒಡೆಯರ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

`ರಣವಿಕ್ರಮ’ ಸಿನಿಮಾದ ಬಳಿಕ ಪುನೀತ್ ರಾಜ್‍ಕುಮಾರ್ ಹಾಗೂ ಪವನ್ ಒಡೆಯರ್ ಒಂದಾಗಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ಈ ಚಿತ್ರ ಆಸ್ಟ್ರೇಲಿಯಾ, ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ಬಿಡುಗಡೆಯಾಗಲಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Click to comment

Leave a Reply

Your email address will not be published. Required fields are marked *