Connect with us

Bollywood

ಸುಶಾಂತ್ ಪ್ರಕರಣ ಸಿಬಿಐಗೆ- ಪಟಾಕಿ ಸಿಡಿಸಿ ಸಂಭ್ರಮಿಸಿದ ಅಭಿಮಾನಿಗಳು

Published

on

Share this

ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಹಸ್ತಾಂತರಿಸುವಂತೆ ಸುಪ್ರೀಂ ಕೋರ್ಟ್ ಮುಂಬೈ ಪೊಲೀಸರಿಗೆ ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ ನಟನ ಅಭಿಮಾನಿಗಳು ಪಟಾಕಿ ಹಚ್ಚಿ ಸಂಭ್ರಮಿಸಿದ್ದಾರೆ.

ಬಿಹಾರದ ಸಹರ್ಷ ನಗರದಲ್ಲಿರುವ ಸುಶಾಂತ್ ಅಭಿಮಾನಿಗಳು ಸಂಭ್ರಮ ವ್ಯಕ್ತಪಡಿಸಿದ್ದಾರೆ. ಸುಶಾಂತ್ ಆತ್ಮಹತ್ಯೆ ಪ್ರಕರಣಕ್ಕೆ ಇನ್ನಾದರೂ ನ್ಯಾಯ ಸಿಗಬಹುದೆಂಬ ನಿರೀಕ್ಷೆಯಲ್ಲಿ ಅವರ ಅಭಿಮಾನಿಗಳು ಇದ್ದಾರೆ. ಇತ್ತ ತನ್ನ ಸಹೋದರನ ಸಾವಿಗೆ ನ್ಯಾಯ ಸಿಗಬೇಕು ಎಂದು ಪ್ರತಿ ದಿನ ಹೋರಾಡುತ್ತಿದ್ದ ಸಹೋದರಿ ಶ್ವೇತ ಸಿಂಗ್ ಕಿರ್ತಿ ಕೂಡ ಸಂತಸ ವ್ಯಕ್ತಪಡಿಸಿದ್ದು, ದೇವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಇದನ್ನೂ ಓದಿ: ದೇವರಿಗೆ ಧನ್ಯವಾದಗಳು, ಸತ್ಯದ ಕಡೆ ಮೊದಲ ಹೆಜ್ಜೆ – ಸುಶಾಂತ್ ಸಿಂಗ್ ಸೋದರಿ

ಮಾಜಿ ಗೆಳತಿ ನಟಿ ರಿಯಾ ಚಕ್ರವರ್ತಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಹೃಷಿಕೇಶ್ ನೇತೃತ್ವದ ಏಕ ಸದಸ್ಯ ಪೀಠ ಅರ್ಜಿ ವಜಾಗೊಳಿಸಿ ಇಂದು ಮಹತ್ವದ ತೀರ್ಪು ನೀಡಿದೆ. ಕಳೆದ ಒಂದು ತಿಂಗಳಿನಿಂದ ಯಾವ ರಾಜ್ಯದ ಪೊಲೀಸರು ಸಾವಿನ ಪ್ರಕರಣದ ತನಿಖೆ ಯಾರು ನಡೆಸಬೇಕು ಎಂಬ ಪ್ರಶ್ನೆಗೆ ಸುಪ್ರೀಂ ಕೋರ್ಟ್ ಈಗ ಮಹತ್ವದ ಆದೇಶವನ್ನು ಪ್ರಕಟಿಸುವ ಮೂಲಕ ಪೂರ್ಣ ವಿರಾಮ ಹಾಕಿದೆ. ಇದನ್ನೂ ಓದಿ: ಮಾನವೀಯತೆಯ ಗೆಲುವು-ಕಂಗನಾ ರಣಾವತ್ ಮೊದಲ ಪ್ರತಿಕ್ರಿಯೆ

ಆದೇಶದಲ್ಲಿ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದಂತೆ ನಟಿ ರಿಯಾ ಚಕ್ರವರ್ತಿ ವಿರುದ್ಧ ದಾಖಲಾಗಿರುವ ಎಫ್‍ಐಆರ್ ಕುರಿತು ಕೇಂದ್ರೀಯ ತನಿಖಾ ದಳದ ತನಿಖೆ ಕಾನೂನು ಬದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್ ಇಂದು ಅಭಿಪ್ರಾಯಪಟ್ಟಿದೆ. ಜೊತೆಗೆ ಸುಶಾಂತ್ ಸಿಂಗ್ ಸಾವಿಗೆ ಸಂಬಂಧಿಸಿದಂತೆ ಭವಿಷ್ಯದಲ್ಲಿ ದಾಖಲಾದ ಇತರ ಯಾವುದೇ ಪ್ರಕರಣಗಳನ್ನು ಪರಿಶೀಲಿಸುವಂತೆ ನ್ಯಾಯಾಲಯ ಸಿಬಿಐಗೆ ನಿರ್ದೇಶನ ನೀಡಿತು. ತನಿಖೆಯಲ್ಲಿ ಸಿಬಿಐಗೆ ಸಹಾಯ ಮಾಡಲು ಮಹಾರಾಷ್ಟ್ರ ಸರ್ಕಾರಕ್ಕೆ ಆದೇಶಿಸಲಾಗಿದೆ.

Click to comment

Leave a Reply

Your email address will not be published. Required fields are marked *

Advertisement