ಕನ್ನಡದ ಸ್ಟಾರ್ ನಟ ದರ್ಶನ್ (Actor Darshan) ಇದೀಗ ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ದರ್ಶನ್ ಬಂಧನದಿಂದ ಅವರ ಕುಟುಂಬಕ್ಕೆ, ಫ್ಯಾನ್ಸ್ಗೆ ನೋವುಂಟು ಮಾಡಿದೆ. ಇದೀಗ ವಿಜಯಲಕ್ಷ್ಮಿ (Vijayalakshmi Darshan) ಮನವಿ ಮಾಡಿದ ಪೋಸ್ಟ್ಗೆ ಫ್ಯಾನ್ಸ್ ಉತ್ತರ ನೀಡಿದ್ದಾರೆ.
ತಾಳ್ಮೆ ಇರಲಿ ನ್ಯಾಯಾಲಯದ ಮೇಲೆ ವಿಶ್ವಾಸವಿಡೋಣ ಎಂದು ಸೋಷಿಯಲ್ ಮೀಡಿಯಾದಲ್ಲಿ ಫ್ಯಾನ್ಸ್ಗೆ ವಿಜಯಲಕ್ಷ್ಮಿ ಮನವಿ ಮಾಡಿದ್ದರು. ಈ ಪೋಸ್ಟ್ಗೆ ಅತ್ತಿಗೆ ನಾವು ನಿಮ್ಮ ಜೊತೆ ಇದ್ದೇವೆ ಎಂದು ಅಭಿಮಾನಿಗಳು ವಿಜಯಲಕ್ಷ್ಮಿಗೆ ಬೆಂಬಲಿಸಿದ್ದಾರೆ. ಇದನ್ನೂ ಓದಿ:‘ಕಲ್ಕಿ 2898 ಎಡಿ’ ಸಿನಿಮಾ ರಿಲೀಸ್- ಮೊದಲ ಶೋಗೆ ಉತ್ತಮ ರೆಸ್ಪಾನ್ಸ್
Advertisement
View this post on Instagram
Advertisement
ಅಂದಹಾಗೆ, ವಿಜಯಲಕ್ಷ್ಮಿ ಶೇರ್ ಮಾಡಿದ ಪೋಸ್ಟ್ನಲ್ಲಿ, ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ ‘ಸೆಲೆಬ್ರಿಟಿಗಳನ್ನು’ ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ. ಇದೊಂದು ಪರೀಕ್ಷೆಯ ಸಮಯ. ನನಗೆ, ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.
Advertisement
ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ. ಸತ್ಯಮೇವ ಜಯತೆ ಎಂದು ದರ್ಶನ್ ಪತ್ನಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
Advertisement
ನಟ ದರ್ಶನ್ ಮತ್ತು ವಿಜಯಲಕ್ಷ್ಮಿ 2003ರಲ್ಲಿ ಮದುವೆಯಾದರು. ಈ ಜೋಡಿಗೆ ವಿನೀಶ್ ಎಂಬ ಮಗನಿದ್ದಾನೆ.