ರಾಮನಗರ: ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಹಿನ್ನೆಲೆ ದರ ಹೆಚ್ಚಳ ಖಂಡಿಸಿ ರಾಮನಗರದಲ್ಲಿ (Ramanagara) ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಪ್ರತಿಭಟನೆ ನಡೆಸಿದ್ದಾರೆ.
ರಾಮನಗರ ಕೆಎಸ್‌ಆರ್‌ಟಿಸಿ (KSRTC) ಬಸ್ ನಿಲ್ದಾಣದಲ್ಲಿ ಬಸ್ ಏರಿ ಕುಳಿತು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪುರಷರಿಗೂ ಬಸ್ ಪ್ರಯಾಣ ಉಚಿತ ಮಾಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸ್ವಾಮಿ ಅವಧೇಶಾನಂದ ಗಿರಿ, ಸದ್ಗುರು ಭೇಟಿಯಾದ ಅಮಿತ್ ಶಾ
ಸರ್ಕಾರ ರಾಜ್ಯ ಜನರ ಬಳಿ ಹಗಲು ದರೋಡೆ ಮಾಡುತ್ತಿದೆ. ಪುರುಷರ ಬಳಿ ದುಪ್ಪಟ್ಟು ಹಣ ವಸೂಲಿ ಮಾಡಿ ಮಹಿಳೆಯರಿಗೆ ಉಚಿತ ಕೊಡುತ್ತಿದೆ. ಪುರುಷರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡಿರುವುದು ಸರಿಯಲ್ಲ. ಕೂಡಲೇ ಸರ್ಕಾರ ದರ ಏರಿಕೆಯನ್ನು ಕೈಬಿಡಬೇಕು. ಇಲ್ಲ ಪುರುಷರಿಗೂ ಉಚಿತ ಬಸ್ ಪಯಣ ಎಂದು ಬಜೆಟ್‌ನಲ್ಲಿ ಘೋಷಣೆ ಮಾಡುವಂತೆ ವಾಟಾಳ್ ನಾಗರಾಜ್ ಒತ್ತಾಯ ಮಾಡಿದರು. ಅಲ್ಲದೇ ಟಿಕೆಟ್ ಖರೀದಿಸದೇ ಬಸ್‌ನಲ್ಲಿ ಪ್ರಯಾಣ ಮಾಡಿ ಸರ್ಕಾರದ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಓಯೋ ಹೊಸ ನಿಯಮ – ಇನ್ಮುಂದೆ ಅವಿವಾಹಿತ ಜೋಡಿಗೆ ಹೋಟೆಲ್ ರೂಮ್ ಇಲ್ಲ!