ಸಂಸತ್‍ನಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್‍ಗೆ ಬೀಳ್ಕೊಡುಗೆ

Public TV
2 Min Read
RAMNATH KOVIND

ನವದೆಹಲಿ: ರಾಜ್ಯಸಭಾ ಮತ್ತು ಲೋಕಸಭೆಯ ಸಂಸದರಿಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಬೀಳ್ಕೊಡುಗೆ ಸಮಾರಂಭವು ಇಂದು ಸಂಸತ್ತಿನಲ್ಲಿ ನಡೆದಿದೆ. ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಎಲ್ಲರಿಗೂ ಧನ್ಯವಾದ ಎಂದು ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಮ್ಮ ಬೀಳ್ಕೊಡುಗೆ ಸಮಾರಂಭದಲ್ಲಿ ಹೇಳಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಯೋಜಿಸಿದ ಬೀಳ್ಗೊಡುಗೆ ಹಾಗೂ ಔತಣಕೂಟ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೋವಿಂದ್ ಅವರು, ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಎಲ್ಲರಿಗೂ ಧನ್ಯವಾದ ಅರ್ಪಿಸಿದರು. ಬಳಿಕ ಸುದೀರ್ಘ ಭಾಷಣ ಮಾಡಿದ ಅವರು, 5 ವರ್ಷಗಳ ಹಿಂದೆ ಇದೇ ವೇದಿಕೆಯಲ್ಲಿ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದೆ. ಇದೀಗ ಹಲವು ಸ್ಮರಣೀಯ ನೆನೆಪುಗಳನ್ನು ಹೊತ್ತು ವಿದಾಯ ಹೇಳುತ್ತಿದ್ದೇನೆ. ಎಲ್ಲ ಸಂಸದರಿಗೂ ನನ್ನ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದರು.

FotoJet 1 6

ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಭಾರತ ಶಕ್ತವಾಗಿ ಹೋರಾಟ ಮಾಡಿದ್ದು, ಕಡಿಮೆ ಸಮಯದಲ್ಲಿ 200 ಕೋಟಿ ಲಸಿಕೆ ನೀಡುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಕಡಿಮೆ ಅವಧಿಯಲ್ಲಿ ಲಸಿಕೆ ಅಭಿವೃದ್ಧಿ ಪಡಿಸಿ, ಸೋಂಕು ನಿಯಂತ್ರಿಸಿದ್ದೇವೆ. ಇದರಿಂದ ಭವಿಷ್ಯದಲ್ಲಿ ಎದುರಾಗಲು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಮಾರ್ಗಸೂಚಿಯನ್ನು ನಿರ್ಮಿಸಲಾಗಿದೆ. ಇದು ಅಭಿನಂದನೆಗೆ ಅರ್ಹ. ಕಷ್ಟದ ಸಮಯದಲ್ಲಿ, ಭಾರತದ ಪ್ರಯತ್ನಗಳನ್ನು ಪ್ರಪಂಚದಾದ್ಯಂತ ಶ್ಲಾಘಿಸಲಾಗಿದೆ ಎಂದು ಕೋವಿಂದ್ ತಿಳಿಸಿದರು. ಇದನ್ನೂ ಓದಿ: ಯಾವುದಕ್ಕೆ ಎಷ್ಟು ಲಂಚ ಕೊಡ್ಬೇಕೆಂದು ರೇಟ್ ಫಿಕ್ಸ್ ಮಾಡಿ ಬೋರ್ಡ್ ಹಾಕಿ: ಡಿಕೆಶಿ ಕ್ಲಾಸ್

ಶುದ್ಧ ಕುಡಿಯುವ ನೀರು ಹಾಗೂ ಪ್ರತಿ ಮನೆಗೆ ಶೌಚಾಲಯ ಸೌಲಭ್ಯವನ್ನೂ ಕೇಂದ್ರ ಸರ್ಕಾರ ಒದಗಿಸುತ್ತಿದೆ. ಉಡಾನ್ ಯೋಜನೆಯಡಿಯಲ್ಲಿ ವಿಮಾನ ನಿಲ್ದಾಣ, ವಿಮಾನ ಪ್ರಯಾಣವನ್ನು ದೇಶದ ಮೂಲೆ ಮೂಲೆಗೂ ವಿಸ್ತರಿಸಲಾಗಿದೆ. ದೇಶದ ಪ್ರತಿಯೊಬ್ಬ ಮಗುವಿಗೆ ಉತ್ತಮ ಶಿಕ್ಷಣ ನೀಡುವ ಜವಾಬ್ದಾರಿ ಸರ್ಕಾರದ್ದಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ರಾಷ್ಟ್ಪೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದೆ ಎಂದರು.

ಇದೇ ವೇಳೆ ರಾಷ್ಟ್ರಪತಿ ಚುನಾವಣೆಯಲ್ಲಿ ಆಯ್ಕೆಯಾಗಿರುವ ದ್ರೌಪದಿ ಮುರ್ಮುಗೆ ಕೋವಿಂದ್ ಅಭಿನಂದನೆ ಸಲ್ಲಿಸಿದರು.‌ ಅಲ್ಲದೆ ದ್ರೌಪದಿಯವರ ಮಾರ್ಗದರ್ಶನದಿಂದ ದೇಶಕ್ಕೆ ಪ್ರಯೋಜನವಾಗಲಿದೆ ಎಂದು ಶುಭ ಹಾರೈಸಿದರು. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಜೊತೆಗೆ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಹಾಗೆಯೇ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಜನಪ್ರತಿನಿಧಿಗಳಿಗೆ, ಸರ್ಕಾರಿ ಅಧಿಕಾರಿಗಳಿಗೆ ಕೋವಿಂದ್ ಧನ್ಯವಾದ ಹೇಳಿದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *