ನವದೆಹಲಿ: ದೇಶಕಂಡ ಅಪರೂಪದ ರಾಜಕಾರಣಿ, ಶ್ರೇಷ್ಠ ಅರ್ಥ ಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ (Manmohan Singh) ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ದೆಹಲಿಯ ನಿಗಮ ಬೋಧ್ ಘಾಟ್‌ನಲ್ಲಿ (Nigam Bodh Ghat) ಸಕಲ ಸರ್ಕಾರಿ ಗೌರವಗಳೊಂದಿಗೆ ಮತ್ತು ಸಿಖ್ ಧರ್ಮದ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತು.
ಹಿರಿಯ ಪುತ್ರಿ ಉಪಿಂದರ್ ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಈ ವೇಳೆ, ತಾಯಿ, ಇಬ್ಬರು ಸಹೋದರಿಯರು ಸೇರಿದಂತೆ ನಿಗಮ ಬೋಧ್ ಘಾಟ್‌ನಲ್ಲಿ ನೆರೆದಿದ್ದ ನಾಯಕರು ಭಾವುಕರಾಗಿ ಬೀಳ್ಕೊಟ್ಟರು. ಈ ವೇಳೆ ʻಮನಮೋಹನ್ ಸಿಂಗ್ ಅಮರ್ ರಹೇʼ, ಸೂರ್ಯ-ಚಂದ್ರ ಇರೋವರೆಗೂ ಸಿಂಗ್ ಅಮರ ಎಂಬ ಘೋಷಣೆ ಮೊಳಗಿದವು. ಇದನ್ನೂ ಓದಿ: ನ್ಯೂ ಇಯರ್ ಸೆಲೆಬ್ರೇಷನ್‌ಗೆ ಬಿತ್ತು ಕಂಡೀಷನ್ – ಡ್ರಂಕ್ & ಡ್ರೈವ್ ಮಾಡಿ ತಗ್ಲಾಕೊಂಡ್ರೆ ಲೈಸೆನ್ಸ್ ರದ್ದು!
Advertisement
Advertisement
ಮನಮೋಹನ್ ಸಿಂಗ್‌ಗೆ ನಿಗಮ ಬೋಧ್ ಘಾಟ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಧನ್ಖರ್, ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi), ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಈ ಎಲ್ಲಾ ನಾಯಕರು ಅಗಲಿದ ನಾಯಕನಿಗೆ ಪುಷ್ಪ ನಮನ ಸಲ್ಲಿಸಿದರು. ಮೂರೂ ಸೇನಾಪಡೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
Advertisement
ಸಕಲ ಸರ್ಕಾರಿ ಗೌರವಗಳೊಂದಿಗೆ 21 ಸುತ್ತು ಕುಶಾಲತೋಪು ಸಿಡಿಸಿ ಗೌರವ ಸಲ್ಲಿಸಲಾಯಿತು. ಅಲ್ಲದೇ, ಪಾರ್ಥಿವ ಶರೀರದ ಮೇಲೆ ಹೊದಿಸಲಾಗಿದ್ದ ರಾಷ್ಟ್ರಧ್ವಜವನ್ನು ಡಾ. ಸಿಂಗ್ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಇದನ್ನೂ ಓದಿ: ಶಿವಣ್ಣನ ಮನೆ ನಾಯಿ ʻನೀಮೋʼ ನಿಧನ – ಕರುಳು ಹಿಂಡುವ ಪತ್ರ ಬರೆದ ಗೀತಾ ಶಿವರಾಜ್‌ಕುಮಾರ್
Advertisement
ಭೂತಾನ್ ದೊರೆ ಜಿಗ್ಮೆ ವಾಂಗ್ಚುಕ್, ಮಾರಿಷಿಯಸ್ ವಿದೇಶಾಂಗ ಸಚಿವ ಮನೀಶ್ ಗೋಬಿನ್ ಕೂಡ ತಮ್ಮ ಅಂತಿಮ ನಮನ ಸಲ್ಲಿಸಿದರು. ಸಿಖ್ ಧರ್ಮದ ಧಾರ್ಮಿಕ ಕ್ರಮದಂತೆ ಶ್ಲೋಕಗಳನ್ನು ಪಠಣೆ ಮಾಡಿ, ಮಧ್ಯಾಹ್ನ 12:55ಕ್ಕೆ ಸರಿಯಾಗಿ ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರಕ್ಕೆ ಅಗ್ನಿ ಸ್ಪರ್ಶ ಮಾಡಲಾಯಿತು.
ಡಾ. ಸಿಂಗ್ ಪಾರ್ಥಿವ ಶರೀರವನ್ನು ದೆಹಲಿಯ ಮೋತಿಲಾಲ್ ನೆಹರು ಮಾರ್ಗದಲ್ಲಿ ಅವರ ನಿವಾಸದಿಂದ ಅಕ್ಬರ್ ರಸ್ತೆಯಲ್ಲಿರುವ ಎಐಸಿಸಿ ಕಚೇರಿಗೆ ಮೆರವಣಿಗೆ ಮೂಲಕ ತರಲಾಯ್ತು. ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ದೆಹಲಿಯ ಜನತೆ ಡಾ. ಮನಮೋಹನ್ ಸಿಂಗ್‌ಗೆ ಅಂತಿಮ ನಮನ ಸಲ್ಲಿಸಿದ್ರು. ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಿಗೆ ಮನಮೋಹನ್ ಸಿಂಗ್‌ರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇದನ್ನೂ ಓದಿ: ಡಿ.ಕೆ ಸುರೇಶ್ ತಂಗಿ ಅಂತ ಹೇಳ್ಕೊಂಡು ವಂಚನೆ ಕೇಸ್ -ಆರೋಪಿ ಐಶ್ವರ್ಯ ಗೌಡ, ಪತಿ ಹರೀಶ್ ಅರೆಸ್ಟ್
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿದಂತೆ ವಿವಿಧ ರಾಜ್ಯಗಳ ಸಿಎಂಗಳು ಸಹಿತ ಕೇಂದ್ರ ಸಚಿವರು ಕಾಂಗ್ರೆಸ್ ನಾಯಕರು ಹಾಜರಿದ್ದರು. ಎಐಸಿಸಿ ಕಚೇರಿಯಿಂದ ಡಾ. ಮನಮೋಹನ್ ಸಿಂಗ್ ಪಾರ್ಥಿವ ಶರೀರದ ಮೆರವಣಿಗೆ ಆರಂಭವಾಯ್ತು. ಯಮುನಾ ನದಿ ತಟದಲ್ಲಿರುವ ನಿಗಮ್ ಬೋಧ್ ಘಾಟ್‌ವರೆಗೂ ಸೇನಾ ವಾಹನದಲ್ಲಿ ಮನಮೋಹನ್ ಸಿಂಗ್ ಅಂತಿಮ ಯಾತ್ರೆ ನಡೀತು. ಮೆರವಣಿಗೆಯುದ್ದಕ್ಕೂ ರಸ್ತೆಯ ಇಕ್ಕೆಲಗಳಲ್ಲಿ ಸಾರ್ವಜನಿಕರು ನಿಂತು ಮಾಜಿ ಪ್ರಧಾನಿಯನ್ನು ಬೀಳ್ಕೊಟ್ಟರು. ಪಾರ್ಥಿವ ಶರೀರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಹೆಗಲು ಕೊಟ್ಟರು.