Bengaluru City
ರಾಜಧಾನಿಗೆ ಕಾಲಿಟ್ಟ ಮಹದಾಯಿ ಹೋರಾಟ – ಬೆಳ್ಳಂಬೆಳಗ್ಗೆ ಹುಬ್ಬಳ್ಳಿಯಿಂದ ಬೆಂಗ್ಳೂರಿಗೆ ರೈತರ ದಂಡು

ಬೆಂಗಳೂರು: ಮಹದಾಯಿ ಹೋರಾಟಗಾರರ ದಂಡು ಇದೀಗ ರಾಜಧಾನಿಗೆ ಕಾಲಿಟ್ಟಿದೆ. ಸಮಸ್ಯೆ ಬಗೆಹರಿಸುವಲ್ಲಿ ಬಿಜೆಪಿ ವಿಫಲವಾಗಿದ್ದಕ್ಕೆ ಆಕ್ರೋಶಗೊಂಡಿರೋ ರೈತರು ಬೆಳ್ಳಂಬೆಳಗ್ಗೆ ಬೆಂಗಳೂರಿಗೆ ಬಂದಿಳಿದಿದ್ದಾರೆ.
ಮಹದಾಯಿ ಹೋರಾಟಗಾರ ವೀರೇಶ್ ಸೊಬರದ್ ಮಠ ನೇತೃತ್ವದಲ್ಲಿ ಹುಬ್ಬಳ್ಳಿಯಿಂದ ಆಗಮಿಸಿರುವ 500ಕ್ಕೂ ಹೆಚ್ಚು ಜನ ರೈತರು ಬೆಂಗಳೂರು ಚಲೋ ನಡೆಸಿ ಮಲ್ಲೇಶ್ವರಂನ ಬಿಜೆಪಿ ಕಚೇರಿ ಎದುರು ಧರಣಿ ಕೂತಿದ್ದಾರೆ. ಇದನ್ನೂ ಓದಿ: ಇಂದಿನಿಂದ ಮಹದಾಯಿ ನೀರಿನ ಚಿಂತೆಯನ್ನು ಬಿಟ್ಟು ಬಿಡಿ: ಬಿಎಸ್‍ವೈ
ಯಾವುದೇ ಕ್ಷಣದಲ್ಲಾದ್ರೂ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಸಾಧ್ಯತೆ ಇದೆ. ಹೀಗಾಗಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಹುಬ್ಬಳ್ಳಿಯಲ್ಲಿ ಗುರುವಾರ ನಡೆದ ಪರಿವರ್ತನಾ ಯಾತ್ರೆಯಲ್ಲಿ ವಿವಾದ ಬಗೆಹರಿಸುವುದಾಗಿ ಬಿಜೆಪಿ ನಾಯಕರು ಹೇಳಿದ್ದರು. ಆದ್ರೆ, ಉತ್ತರ ಕರ್ನಾಟಕ ಭಾಗದ ಜನರಿಗೆ ಮತ್ತೆ ಅನ್ಯಾಯವಾಗಿದೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಹದಾಯಿ ವಿಚಾರದಲ್ಲಿ ಗೋವಾ ಪ್ರಜೆಗಳು ಹೆದರುವ ಅಗತ್ಯವಿಲ್ಲ: ಪರಿಕ್ಕರ್
