– ಒಮ್ಮೆಯಾದರೂ ವಿಮಾನದಲ್ಲಿ ಪ್ರಯಾಣ ಮಾಡ್ಬೇಕು ಎಂಬ ಆಸೆ ವ್ಯಕ್ತಪಡಿಸಿದ್ದ ಕಾರ್ಮಿಕರು
ದಾವಣಗೆರೆ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಕೂಲಿ ಕಾರ್ಮಿಕರಿಗೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಶಿರಗನಹಳ್ಳಿ ರೈತರೊಬ್ಬರು ವಿಮಾನಯಾನ ಮಾಡಿಸಿದ್ದಾರೆ.
ಶಿರಗನಹಳ್ಳಿ ರೈತ ವಿಶ್ವನಾಥ್‌ರಿಂದ ಹತ್ತು ಜನ ಮಹಿಳಾ ಕೂಲಿ ಕಾರ್ಮಿಕರಿಗೆ ವಿಮಾನ ಪ್ರಯಾಣ ಮಾಡಿಸಿ ಆಸೆ ಪೂರೈಸಿದ್ದಾರೆ. ಇದನ್ನೂ ಓದಿ : ಅಧಿಕಾರ ಹಂಚಿಕೆ – ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿ ಇರಬೇಕು: ಸಿದ್ದರಾಮಯ್ಯ
ವಿಶ್ವನಾಥ್ ತೋಟಕ್ಕೆ ಕೂಲಿ ಕೆಲಸಕ್ಕೆ ಬರುತ್ತಿದ್ದ ಮಹಿಳೆಯರು, ಒಮ್ಮೆಯಾದರೂ ವಿಮಾನದಲ್ಲಿ ಪ್ರಯಾಣ ಬೆಳೆಸಬೇಕೆಂಬ ಆಸೆ ವ್ಯಕ್ತಪಡಿಸಿದ್ದರು. ಇದನ್ನೂ ಓದಿ : ಡಬಲ್ ಟ್ಯಾಕ್ಸ್ ಕಟ್ಟಿ ಬಿ-ಖಾತಾ ಪಡೆಯಿರಿ: ಸಿಎಂ ಸಭೆಯಲ್ಲಿ ಮಹತ್ವದ ನಿರ್ಧಾರ
ಮಹಿಳಾ ಕಾರ್ಮಿಕರ ಆಸೆಯಂತೆ ಶಿವಮೊಗ್ಗ ಏರ್‌ಪೋರ್ಟ್ ಗೋವಾದವರೆಗೂ ವಿಮಾನ ಪ್ರಯಾಣ ಮಾಡಿಸಿದ್ದಾರೆ. ವಿಮಾನಯಾನ ಭಾಗ್ಯ ನೀಡಿದ ರೈತನ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ : ಕಳಿಂಗ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ – ಲಕ್ನೋದಲ್ಲಿ 21 ವರ್ಷದ ಯುವಕನ ಬಂಧಿಸಿದ ಪೊಲೀಸರು