ಹುಬ್ಬಳ್ಳಿ: 2023ರ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar), ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ಇದೀಗ ಮತ್ತೆ ಬಿಜೆಪಿ ಸೇರುತ್ತಿದ್ದಂತೆ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ.
ಹುಬ್ಬಳ್ಳಿಯಲ್ಲಿಂದು (Hubballi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೋಡ್ಸೇ ಗಾಂಧಿಯನ್ನ ಹತ್ಯೆ ಮಾಡಿದ್ದಾರೆ ಎನ್ನುತ್ತಲೇ 70 ವರ್ಷ ಕಾಂಗ್ರೆಸ್‌ನವರು ಸರ್ಕಾರ ನಡೆಸಿಕೊಂಡು ಬಂದಿದ್ದಾರೆ. ಅದಕ್ಕೆ ಬಿಜೆಪಿ (BJP) ಕೂಡ ಉತ್ತರ ಕೊಟ್ಟಿದೆ. ಅದನ್ನೇ ಪದೇ-ಪದೇ ಹೇಳಿ ಜನರನ್ನ ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಶೆಟ್ಟರ್ ಹೇಳಿದ್ದಾರೆ. ಇದನ್ನೂ ಓದಿ: ಭೂಮಿ ತಾಯಿಯ ಋತುಸ್ರಾವವನ್ನು ಸಂಭ್ರಮಿಸುವ ಹಬ್ಬ ಕೆಡ್ಡಸ- ತುಳುನಾಡಿನಲ್ಲಿ ಆಚರಣೆ ಹೇಗೆ?
Advertisement
Advertisement
ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ ಎಂಬ ಕೆ.ಎಸ್ ಈಶ್ವರಪ್ಪ (KS Eshwarappa) ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಈಗಾಗಲೇ ಪ್ರತಿಕ್ರಿಯಿಸಿದ್ದಾರೆ. ಯಾರೇ ಆಗಲಿ ಲಕ್ಷ್ಮಣ ರೇಖೆ ದಾಟಬಾರದು ಎಂದು ಹೇಳುವ ಮೂಲಕ ಈಶ್ವರಪ್ಪರನ್ನ ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಮಾನವನ ದೇಹಕ್ಕೆ ಕೃತಕ ಉಸಿರಾಟ ಒದಗಿಸುವ ಕಬ್ಬಿಣದ ಶ್ವಾಸಕೋಶ – ಹೇಗೆ ಕೆಲಸ ಮಾಡುತ್ತೆ?
Advertisement
ಇನ್ನೂ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ ಸ್ಪರ್ಧೆ ವಿಚಾರವಾಗಿ ಮಾತನಾಡಿ, ಪಕ್ಷದ ಹೈಕಮಾಂಡ್ ನಾಯಕರು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಕುರಿತು ಸಭೆಯಲ್ಲಿ ಚರ್ಚೆಗಳಾಗಿವೆ. ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ. ಪಕ್ಷದ ಹೈಕಮಾಂಡ್ ಸ್ಪರ್ಧೆ ವಿಚಾರದ ಬಗ್ಗೆ ಏನು ತೀರ್ಮಾನ ತೆಗೆದುಕೊಳ್ಳುತ್ತೋ ಅದಕ್ಕೆ ನಾನು ಬದ್ಧ ಎಂದಿದ್ದಾರೆ.
Advertisement
ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಪಕ್ಷದ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು, ಈ ಬಗ್ಗೆ ಪಕ್ಷದ ನಾಯಕರು ಯಾರೂ ಚರ್ಚೆ ಮಾಡಿಲ್ಲ. ಪಕ್ಷದ ನಾಯಕರ ಯಾವುದೇ ನಿರ್ಧಾರಕ್ಕೆ ನಾನು ಬದ್ಧ ಎಂದು ಹೇಳುವ ಮೂಲಕ ಪರೋಕ್ಷವಾಗಿ ಧಾರವಾಡ ಲೋಕಸಭಾ ಚುನಾವಣೆಯ ಸ್ಪರ್ಧೆ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಕಣ ರಂಗು – ಪುಟ್ಟಣ್ಣ ಸೋಲಿಸುವಂತೆ ಶಿಕ್ಷಕರಿಗೆ ವಿಜಯೇಂದ್ರ ಮನವಿ