ರಾಯಚೂರು: ಆಕ್ಸಿಸ್ ಬ್ಯಾಂಕ್ ಸಾಲದ ನೋಟಿಸ್‍ಗೆ ಹೆದರಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಬೆಣಕಲ್ ಗ್ರಾಮದಲ್ಲಿ ನಡೆದಿದೆ.
ಬೆಣಕಲ್ ಗ್ರಾಮದ ನಿವಾಸಿ ರಾಮಪ್ಪ (35) ಆತ್ಮಹತ್ಯೆ ಮಾಡಿಕೊಂಡ ರೈತ. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ರಾಮಪ್ಪ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆಕ್ಸಿಸ್ ಬ್ಯಾಂಕ್‍ನಲ್ಲಿ 10 ಲಕ್ಷ ರೂ. ಸಾಲ ಮಾಡಿದ್ದ. ಮಳೆ ಇಲ್ಲದೆ ಬರಗಾಲ ಹಿನ್ನೆಲೆ ಬೆಳೆ ಬಾರದೆ ಸಾಲ ತೀರಿಸುವ ದಾರಿ ಕಾಣದೇ ಆತ್ಮಹತ್ಯೆಗೆ ಶರಣಾಗಿದ್ದಾನೆ.
Advertisement
ರಾಮಪ್ಪ 20 ಎಕರೆ ಜಮೀನು ಹೊಂದಿದ್ದು, ಬ್ಯಾಂಕ್‍ನಿಂದ ಪಡೆದಿದ್ದ ಹಣವನ್ನು ಕೃಷಿ ಚಟುವಟಿಕೆಗಾಗಿ ಖರ್ಚು ಮಾಡಿದ್ದ. ಆದರೆ ಮಳೆಯಾಗದೇ ಫಸಲು ಕೈಕೊಟ್ಟಿದ್ದು, ಬ್ಯಾಂಕ್ ಸಾಲ ಪಾವತಿ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಆಕ್ಸಿಸ್ ಬ್ಯಾಂಕ್ ನೋಟಿಸ್ ಕಳುಹಿಸಿದೆ. ಇದಕ್ಕೆ ಹೆದರಿ ಪತ್ನಿ ಹಾಗೂ ಐದು ಜನ ಪುತ್ರಿಯರನ್ನು ಬಿಟ್ಟು ನೇಣಿಗೆ ಶರಣಾಗಿದ್ದಾನೆ.
Advertisement
ಈ ಕುರಿತು ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಭೀಕರ ಬರಗಾಲ ಎದುರಾಗಿರುವುದರಿಂದ ರೈತರು ಆತ್ಮಸ್ಥೈರ್ಯ ಕಳೆದುಕೊಂಡಿದ್ದಾರೆ. ಈ ಮೂಲಕ ರಾಮಣ್ಣ ಸೇರಿದಂತೆ ಕಳೆದ 8 ತಿಂಗಳಲ್ಲಿ ಜಿಲ್ಲೆಯಲ್ಲಿ 20 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Advertisement
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews