ಕೋಲಾರ: ಬೆಳೆದ ಬೆಳೆಗೆ ಮಾರುಕಟ್ಟೆಯಲ್ಲಿ ಸರಿಯಾದ ಬೆಲೆ ಸಿಗದ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಈ ನಡುವೆ ನವಿಲುಕೋಸು ಬೆಳೆದ ರೈತರೊಬ್ಬರು ಸರಿಯಾದ ಬೆಲೆ ಸಿಗದ ಹಿನ್ನೆಲೆಯಲ್ಲಿ ತಾನು ಬೆಳೆದ ಬೆಳೆಯನ್ನು ತಾನೇ ಕೈಯಾರೇ ನಾಶ ಮಾಡಿರುವ ಘಟನೆ ಕೋಲಾರ (Kolar) ತಾಲೂಕಿನ ಕಳ್ಳಿಪುರ ಗ್ರಾಮದಲ್ಲಿ ನಡೆದಿದೆ.ಇದನ್ನೂ ಓದಿ: ಅತ್ತೆ, ಮಾವನ ಕೊಂಕು ಮಾತಿನಿಂದ ಗಲಾಟೆ: ಡಾ.ಪ್ರಿಯದರ್ಶಿನಿ
ಕಳ್ಳಿಪುರ ಗ್ರಾಮದ ಆನಂದ ಎಂಬ ರೈತ 2 ಎಕ್ರೆ ಬೆಳೆದಿದ್ದ ನವಿಲುಕೋಸು ಬೆಳೆಯನ್ನು ತಾನೇ ನಾಶ ಮಾಡಿದ್ದಾರೆ. ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಿದ್ದ ಬೆಳೆ ಮೇಲೆ ಟ್ರ್ಯಾಕ್ಟರ್ ಹರಿಸಿ ನಾಶ ಮಾಡಿದ್ದಾರೆ. ಇದನ್ನೂ ಓದಿ: ಲವ್ ಜಿಹಾದ್ ಕಲಿಸೋ ಮದರಸಾಗಳಿಗೆ ಸಿದ್ದರಾಮಯ್ಯ ಸರ್ಕಾರ ಹಣ ಕೊಡ್ತಿದೆ: ಯತ್ನಾಳ್ ಕೆಂಡ
ಸರ್ಕಾರ ರೈತರು ಬೆಳೆಯುವ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಬೇಕು ಜೊತೆಗೆ ಸರ್ಕಾರ ರೈತರ ನೆರವಿಗೆ ಬರಬೇಕೆಂದು ಆಗ್ರಹಿಸಿದ್ದಾರೆ. ಅಲ್ಲದೇ ಕಳೆದ 15 ದಿನಗಳಿಂದ ಗೆಡ್ಡೆ ಕೋಸು, ಹೂಕೋಸು ಸೇರಿದಂತೆ ಬ್ರಕ್ಲೋನ್‌ಗೆ ಬೆಲೆ ಇಲ್ಲದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.