ಬೆಳಗಾವಿ: ತುಂಡಾಗಿ ಬಿದ್ದಿದ್ದ ವಿದ್ಯುತ್ ಸ್ಪರ್ಶಿಸಿ ರೈತರೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ವೀರಾಪುರ ಗ್ರಾಮದಲ್ಲಿ ನಡೆದಿದೆ.
ನಿಜಗುಣಯ್ಯ ಗುಂಡಕಲ್(45) ಮೃತ ದುರ್ದೈವಿ. ಇವರು ವೀರಾಪುರ ಗ್ರಾಮದ ನಿವಾಸಿಯಾಗಿದ್ದು, ಇಂದು ಬೆಳಗ್ಗೆ ತಮ್ಮ ಜಮೀನಿಗೆ ಕೆಲಸಕ್ಕೆಂದು ಹೋಗಿದ್ದಾರೆ. ಈ ವೇಳೆ ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೇ ತುಳಿದಿದ್ದಾರೆ. ವಿದ್ಯುತ್ ಹರಿದ ಪರಿಣಾಮ ರೈತ ಸ್ಥಳದಲ್ಲಿಯೇ ಅಸುನೀಗಿದ್ದಾರೆ.
ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಿಮಿಸಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕಿತ್ತೂರು ಪೊಲೀಸ್ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ಸಂಬಂಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.