ರಾಯಚೂರು: ಬಿಸಿಲಿನ ತಾಪದಿಂದ (Heatstroke) ಹೊಲದ ಕೆಲಸಕ್ಕೆ ತೆರಳಿದ್ದ ರೈತರೊಬ್ಬರು ಸಾವಿಗೀಡಾದ ಘಟನೆ ತಾಲೂಕಿನ (Raichur) ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹನುಮಂತು (45) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಹೊಲದಿಂದ ಬಣವೆ ಕೆಲಸ ಮುಗಿಸಿಕೊಂಡು ಮನೆಯ ಬಳಿ ಬಂದು ನೀರು ಕುಡಿಯುತ್ತಿದ್ದಂತೆ ಅವರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಈ ಹಠಾತ್ ಸಾವಿನಿಂದ ಕಂಗಾಲಾದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ರಾಯಚೂರಿನಲ್ಲಿ 15 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು
ರಾಯಚೂರಿನಲ್ಲಿ ಕಳೆದ 15 ವರ್ಷಗಳಲ್ಲೇ ಈ ಬಾರಿ ದಾಖಲೆಯ ಅತೀ ಹೆಚ್ಚು ತಾಪಮಾನ ದಾಖಲಾಗಿದೆ. ಕಳೆದ ಮೂರು ದಿನಗಳಿಂದ ರಾಯಚೂರಿನಲ್ಲಿ ಸರಾಸರಿ 46.7 ಡಿಗ್ರಿ ಸೆಲ್ಸಿಯಸ್ ಬಿಸಿಲಿನ ತಾಪಮಾನ ದಾಖಲಾಗಿದೆ. ಇದನ್ನೂ ಓದಿ: ನಾಲ್ಕು ಸ್ಥಾನ ಕಳೆದುಕೊಳ್ಳುವ ಮೂಲಕ ಜೆಡಿಎಸ್ ರಾಜ್ಯದಲ್ಲಿ ಮುಕ್ತವಾಗುತ್ತೆ: ವಿನಯ್‌ಕುಮಾರ್ ಸೊರಕೆ