– ಮೃತ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ
ಶಿವಮೊಗ್ಗ: ಜಿಲ್ಲೆಯಲ್ಲಿ ಅರಣ್ಯ ಒತ್ತುವರಿ ಜಮೀನು ತೆರವಿಗೆ ವಿರೋಧಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆಗೆ ಸರ್ಕಾರ ಮಣಿದಿದೆ. ಆರ್ ಎಫ್ ಓ ಹನುಮಂತಪ್ಪ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಿಎಂ ಭರವಸೆ ನೀಡಿದ್ದಾರೆ.
ರೈತ ಮುಖಂಡ ಉಮೇಶ್‍ರೊಂದಿಗೆ ಫೋನ್‍ನಲ್ಲಿ ಮಾತನಾಡಿ ಅರಣ್ಯ ಒತ್ತುವರಿ ತೆರವು ಕಾರ್ಯ ಸ್ಥಗಿತಕ್ಕೆ ಸೂಚಿಸಿದ್ರು. ಅಲ್ಲದೇ ಮೃತ ರೈತನ ಕುಟುಂಬಕ್ಕೆ ಐದು ಲಕ್ಷ ರೂ. ಪರಿಹಾರದ ಭರವಸೆ ನೀಡಿದ್ರು.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ವಲಯದಲ್ಲಿ ಅರಣ್ಯ ಒತ್ತುವರಿ ಜಮೀನು ತೆರವು ವಿರೋಧಿಸಿ ಶುಕ್ರವಾರ ಬೆಳಗ್ಗೆಯಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ 65 ವರ್ಷದ ರೈತ ಲಕ್ಷ್ಮಣಪ್ಪ ಹೃದಯಾಘಾತದಿಂದ ಮೃತಪಟ್ಟಿದ್ದರು. ಹೀಗಾಗಿ ಅರಣ್ಯಾಧಿಕಾರಿ ಕಚೇರಿ ಮುಂದೆ ಮೃತ ರೈತನ ಶವವಿಟ್ಟು ಪ್ರತಿಭಟನೆ ತೀವ್ರಗೊಳಿಸಿದ್ದರು. ಬಿಜೆಪಿಗರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಪ್ರತಿಭಟನೆಯಲ್ಲಿ ಸಂಸದ ಬಿ.ವೈ ರಾಘವೆಂದ್ರ, ಶಾಸಕರಾದ ಅರಗ ಜ್ಞಾನೇಂದ್ರ, ಹರತಾಳು ಹಾಲಪ್ಪ ಭಾಗಿಯಾಗಿದ್ದರು.
ಸರ್ಕಾರ ರೈತರಿಗೆ ನೆಮ್ಮದಿ ನೀಡುವ ಬದಲು ದಬ್ಬಾಳಿಕೆ ನಡೆಸುತ್ತಿದೆ. ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದೆ. ಶಿವಮೊಗ್ಗದ ಹೊಸನಗರ ತಾಲೂಕಿನ ಮಸರೂರು ಗ್ರಾಮದ ರೈತ, ಅಧಿಕಾರಿಗಳ ದಬ್ಬಾಳಿಕೆಗೆ ಜೀವ ತೆತ್ತಿದ್ದಾನೆ. 30-40 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದ ರೈತರನ್ನು ಒಕ್ಕಲೆಬ್ಬಿಸಲು ಹೋದಾಗ ರೈತರು ಪ್ರತಿಭಟನೆ ನಡೆಸಿದ್ದಾರೆ. ಆರ್ ಎಫ್ ಓ ಹನುಮಂತಯ್ಯ ಮತ್ತು ಸಿಬ್ಬಂದಿ ದಬ್ಬಾಳಿಕೆಗೆ ರೈತ ಲಕ್ಷ್ಮಣ್ ಸ್ಥಳದಲ್ಲೇ ಕುಸಿದು ಸತ್ತಿದ್ದಾರೆ. ಸರ್ಕಾರ ಈ ಕೂಡಲೇ ರೈತರನ್ನ ಒಕ್ಕಲೆಬ್ಬಿಸೋ ಪ್ರಯತ್ನ ಕೈ ಬಿಡಬೇಕು. ಅಲ್ಲದೇ ರೈತ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಣೆ ಮಾಡಬೇಕು. ತಕ್ಷಣ ಆರ್ ಎಫ್ ಓ ಹನುಮಂತಯ್ಯ ಅವರನ್ನ ಕೆಲಸದಿಂದ ಅಮಾನತ್ತಿನಲ್ಲಿ ಇಟ್ಟು ತನಿಖೆ ನಡೆಸಬೇಕು ಎಂದು ಇದೇ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಒತ್ತಾಯಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews