ಕೋಲಾರ: ರೇಷ್ಮೆ ಬೆಲೆ ಕುಸಿತ ಹಾಗೂ ಸಾಲಬಾಧೆಯಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ತಾಲೂಕಿನ ಮಟ್ನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಟ್ನಹಳ್ಳಿ ಗ್ರಾಮದ ವೆಂಕಟಪ್ಪ(55) ಆತ್ಮಹತ್ಯೆಗೆ ಶರಣಾದ ರೈತ. ವೆಂಕಟಪ್ಪ ಮಟ್ನಹಳ್ಳಿ ಗ್ರಾಮದಲ್ಲಿ 4 ಎಕರೆ ಜಮೀನಿನಲ್ಲಿ ರೇಷ್ಮೆ ಕೃಷಿ ಮಾಡುತ್ತಿದ್ದರು. ಅಲ್ಲದೇ ಇತ್ತೀಚೆಗೆ ಬೆಳೆದ ರೇಷ್ಮೆಯನ್ನ ಮಾರುಕಟ್ಟೆಗೆ ಹಾಕಿದ್ದರು. ಮಾರುಕಟ್ಟೆಯಲ್ಲಿ ರೇಷ್ಮೆಗೆ ಪ್ರತಿ ಕೆಜಿಗೆ 200 ರಿಂದ 300 ರೂಪಾಯಿಗೆ ಮಾರಾಟವಾಗಿದ್ದರಿಂದ ಬೇಸತ್ತ ರೈತ ವೆಂಕಟಪ್ಪ ಇಂದು ಮುಂಜಾನೆ ರೇಷ್ಮೆ ಬೆಳೆಯುವ ಮನೆ ಬಳಿ ಇದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Advertisement
ಮೃತ ವೆಂಕಟಪ್ಪ ಕೆನರಾ ಬ್ಯಾಂಕ್, ಪ್ರಗತಿ ಗ್ರಾಮೀಣ ಬ್ಯಾಂಕ್ ಹಾಗೂ ಕೈ ಸಾಲ ಸೇರಿದಂತೆ ಸುಮಾರು 20 ಲಕ್ಷದಷ್ಟು ಸಾಲ ಮಾಡಿಕೊಂಡಿದ್ದರು. ಬೆಳೆದ ರೇಷ್ಮೆ ಬೆಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಸಾಲ ತೀರಿಸಲು ಭಯಪಟ್ಟು ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
Advertisement
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
https://www.youtube.com/watch?v=Ak9d50WwJAY