ಶಿವಮೊಗ್ಗ: ರೈತರೊಬ್ಬರು ತನ್ನ ತೋಟದ ಮನೆಗೆ ನಿರಂತರ ವಿದ್ಯುತ್ ಸಂಪರ್ಕ ನೀಡದ ಮೆಸ್ಕಾಂ ಅಧಿಕಾರಿಗಳ ವಿರುದ್ಧ ವಿಭಿನ್ನವಾಗಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.
Advertisement
ಹನುಮಂತಪ್ಪ ಮೆಸ್ಕಾಂ ಕಚೇರಿಯಲ್ಲೇ ಮಸಾಲೆ ರುಬ್ಬುತ್ತಿದ್ದ ರೈತ. ಅವರು ಪ್ರತಿನಿತ್ಯ ಮನೆಯಿಂದ ಮಿಕ್ಸಿ ತಂದು ಮೆಸ್ಕಾಂ ಕಚೇರಿಯಲ್ಲಿ ಮಸಾಲೆ ರುಬ್ಬಿಕೊಂಡು ಹೋಗುತ್ತಿದ್ದರು. ಹಲವು ವರ್ಷಗಳಿಂದ ಅವರು ತೋಟದ ಮನೆಯಲ್ಲಿಯೇ ವಾಸವಿದ್ದರು. ಅವರ ತೋಟದಲ್ಲಿರುವ ಕೊಳವೆ ಬಾವಿಯ ಐಪಿ ಸೆಟ್‍ಗೆ ವಿದ್ಯುತ್ ಸಂಪರ್ಕ ಇದೆ. ಆದರೆ ಐಪಿ ಸೆಟ್‍ನ ವಿದ್ಯುತ್‍ಗೆ ಸಮಯ ನಿಗದಿ ಇಲ್ಲ. ಹೀಗಾಗಿ ಮನೆಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಅವರು ಮೆಸ್ಕಾಂಗೆ ಮನವಿ ಮಾಡಿಕೊಂಡಿದ್ದರು. ಇದನ್ನೂ ಓದಿ: ಸಿದ್ದರಾಮಯ್ಯ ಮೆಂಟಲ್ ಗಿರಾಕಿಯ ರೀತಿ ಆಡಬಾರದು, ಪ್ರಬುದ್ಧವಾಗಿ ಮಾತನಾಡಬೇಕು: ಸಿ.ಟಿ.ರವಿ ವ್ಯಂಗ್ಯ
Advertisement
Advertisement
ರೈತ ಕಳೆದ 6 ತಿಂಗಳಿನಿಂದ ಮೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಿದ್ದು, ವಿದ್ಯುತ್ ಸಂಪರ್ಕ ಕಲ್ಪಿಸದ ಹಿನ್ನೆಲೆಯಲ್ಲಿ ಮೆಸ್ಕಾಂ ಕಚೇರಿಯಲ್ಲೇ ಮಸಾಲೆ ರುಬ್ಬಿಕೊಂಡು ಹೋಗುತ್ತಿದ್ದಾರೆ. ಇದನ್ನೂ ಓದಿ: ಮಗನ ಕಾಯಿಲೆ ಗುಣಪಡಿಸ್ತೀನೆಂದು ಮಹಿಳೆ ಮೇಲೆ ಸ್ವಯಂಘೋಷಿತ ದೇವಮಾನವ ರೇಪ್