ಹಾವೇರಿ: ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ರೈತರೊಬ್ಬರು ಹಾವೇರಿಯಲ್ಲಿ ಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ.
Advertisement
ನಗರದ ಹೊಸಮನಿ ಸಿದ್ದಪ್ಪ ಸರ್ಕಲ್ ಬಳಿ ರೈತ ಕಾಳಪ್ಪ ಲಮಾಣಿ ಬೆತ್ತಲಾಗಿ ಪ್ರತಿಭಟನೆ ನಡೆಸಿದ್ದಾರೆ. ಇನ್ನೂ ಇದೇ ವೇಳೆ ಚಂದ್ರಪ್ಪ ಎಂಬವರು ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
Advertisement
Advertisement
ಹುಚ್ಚವ್ವನಹಳ್ಳಿ ಮಂಜುನಾಥ ಬಣದ ಕಾರ್ಯಕರ್ತರು ನಗರದ ಮುರುಘರಾಜೇಂದ್ರಮಠದಿಂದ ಅರೆಬೆತ್ತಲೆ ಪ್ರತಿಭಟನೆ ಪ್ರಾರಂಭಿಸಿ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೆಲ ರೈತರು ಬೇವಿನಸೊಪ್ಪು ಕಟ್ಟಿಕೊಂಡು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.
Advertisement
ಇದೂವರೆಗೂ ಜಿಲ್ಲೆಯ ಯಾವ ರೈತರಿಗೂ ಬಗರ್ ಹುಕುಂ ಪತ್ರವನ್ನು ನೀಡಿಲ್ಲ. ಈ ಹಿನ್ನೆಲೆಯಲ್ಲಿ ರೈತರು ರಾಣೇಬೆನ್ನೂರು ಪಟ್ಟಣದಲ್ಲಿ ಪ್ರತಿಭಟನೆ ಕೈಗೊಂಡಿದ್ರೂ, ಯಾವ ಅಧಿಕಾರಿಗಳು ಗಮನ ಹರಿಸಿರಲಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ರೈತ ಕಾಳಪ್ಪ ಸಾರ್ವಜನಿಕವಾಗಿ ಬೆತ್ತಲಾಗುವ ಮೂಲಕ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ವಿಷ ಸೇವಿಸಿದ ರೈತ ಚಂದ್ರಪ್ಪ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರತಿಭಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ರೈತರ ಮನವೊಲಿಸುವಲ್ಲಿ ನಿರತರಾಗಿದ್ದಾರೆ. ಮುನ್ನೇಚ್ಚರಿಕಾ ಕ್ರಮವಾಗಿ ಪ್ರತಿಭಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
https://www.youtube.com/watch?v=ODhN2OQZmUI