-ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರಕ್ಕೆ ಮೊದಲ ಬಲಿ
ಮಂಡ್ಯ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ ಬಜೆಟ್‍ನಲ್ಲಿ ಸಾಲ ಮನ್ನಾ ಮಾಡಿಲ್ಲ ಎಂದು ತಿಳಿದ ರೈತರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯದ ಟಿ.ಮಲ್ಲಿಗೆರೆ ಗ್ರಾಮದಲ್ಲಿ ನಡೆದಿದೆ.
ಪ್ರಕಾಶ್ ಆತ್ಮಹತ್ಯೆಗೆ ಶರಣಾದ ರೈತ. ಬಜೆಟ್‍ನಲ್ಲಿ ಸಾಲ ಮನ್ನಾ ಮಾಡಿಲ್ಲ ಎಂದು ತಿಳಿದು ಪ್ರಕಾಶ್ ಹೊಲಕ್ಕೆ ಹೋದವರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕಾಶ್ ಅವರು ಒಂದು ಎಕರೆ ಭೂಮಿಯನ್ನು ಹೊಂದಿದ್ದು, ಬ್ಯಾಂಕ್ ಸೇರಿದಂತೆ 3.5 ಲಕ್ಷ ಸಾಲ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.
ಪ್ರಕಾಶ್ ಸಾಲ ಸೋಲ ಮಾಡಿ ಕೊಳವೆ ಬಾವಿ ಕೊರೆಸಿದ್ರು. ಆರಂಭದಲ್ಲಿ ನೀರು ಬಂದಿದ್ರಿಂದ ತಮ್ಮ ಒಂದು ಎಕರೆ ಜಮೀನಲ್ಲಿ ಕಬ್ಬಿನ ಬೆಳೆ ಬೆಳೆದಿದ್ರು. ಆದ್ರೆ ಭೀಕರ ಬರಗಾಲದಿಂದಾಗಿ ಕೊಳವೆ ಬಾವಿಯಲ್ಲಿ ನೀರು ಕೂಡ ಬತ್ತಿ ಹೋಗಿತ್ತು. ಪ್ರಕಾಶ್ ಸಾಲ ಮನ್ನಾ ಮಾಡಿದ್ರೆ ಹೇಗಾದ್ರೂ ಜೀವನ ನಡೆಸಬಹುದು ಎಂಬ ನಂಬಿಕೆಯಲ್ಲಿದ್ರು. ಆದ್ರೆ ಸಾಲ ಮನ್ನಾ ಬಗ್ಗೆ ಬಜೆಟ್‍ನಲ್ಲಿ ಯಾವುದೇ ಪ್ರಸ್ತಾಪವಾಗದ ಹಿನ್ನೆಲೆಯಲ್ಲಿ ಪ್ರಕಾಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ.