ಮಂಡ್ಯ: ಸಾಲಬಾಧೆ ತಾಳಲಾರದೆ ರೈತರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಜಿಲ್ಲೆಯ ಮದ್ದೂರು ತಾಲೂಕಿನ ಆಬಲವಾಡಿ ಗ್ರಾಮದ ರೈತ ಕೃಷ್ಣೇಗೌಡ (41) ಆತ್ಮಹತ್ಯೆಗೆ ಶರಣಾದ ರೈತ. ಕೃಷ್ಣೇಗೌಡ ಅವರು ಸುಮಾರು ಒಂದು ಎಕರೆ ಪ್ರದೇಶದಲ್ಲಿ ಕಬ್ಬು ಬೆಳೆ ಬೆಳೆದಿದ್ರು. ಬೇಸಾಯಕ್ಕೆಂದು ಸುಮಾರು ಮೂರುವರೆ ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ರು. ಆದ್ರೆ ಬೆಳೆ ನೀರಿಲ್ಲದೆ ಒಣಗಿ ಹೋಗಿತ್ತು. ಜೊತೆಗೆ ಸಾಲಗಾರರ ಕಾಟ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಬೇಸತ್ತು ಇಂದು ಬೆಳಗ್ಗೆ ತಮ್ಮ ಜಮೀನಿನ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿಟ್ಟಿರುವ ರೈತ ಕೃಷ್ಣೇಗೌಡ, ನನ್ನ ಸಾವಿಗೆ ನಾನೇ ಕಾರಣ. ನನ್ನ ಹೆಂಡತಿ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ. ನಾನು ವ್ಯವಸಾಯಕ್ಕಾಗಿ ಬ್ಯಾಂಕ್ ನಲ್ಲಿ ಮತ್ತು ಸ್ನೇಹಿತರ ಬಳಿ ಸಾಲ ಮಾಡಿದ್ದೆ. ಯಾವುದೇ ಬೆಳೆ ಆಗದಿರುವುದರಿಂದ ಮನನೊಂದಿದ್ದೇನೆ. ದಯಮಾಡಿ ಕ್ಷಮಿಸಿ ಅಂತಾ ಬರೆದಿದ್ದಾರೆ. ಈ ಸಂಬಂಧ ಕೊಪ್ಪ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.