ಚಿಕ್ಕಮಗಳೂರು: ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ಏಕಾಏಕಿ ದಾಳಿ (Elephant Attack) ನಡೆಸಿ ಕೊಂದು ಹಾಕಿದ ಘಟನೆ ಚಿಕ್ಕಮಗಳೂರು (Chikkamagaluru) ತಾಲೂಕಿನ ಪುರ ಗ್ರಾಮದಲ್ಲಿ ನಡೆದಿದೆ.
ಹಾವೇರಿ (Haveri) ಜಿಲ್ಲೆಯ ಹಾನಗಲ್ ಸಮೀಪದ ತಿರುವಳ್ಳಿ ಮೂಲದ ಯಲ್ಲಪ್ಪ (45) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಅವರು ನಾಗೇಶ್ ಗೌಡ ಎಂಬವರ ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ಸ್ಥಳದಲ್ಲೇ ಅವರು ಸಾವಿಗೀಡಾಗಿದ್ದಾರೆ. ಇದನ್ನೂ ಓದಿ:
ಯಲ್ಲಪ್ಪ ಅವರು ಕೂಲಿ ಕೆಲಸ ಹಾಗೂ ಗಾರೆ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ (Forest Department) ಅಧಿಕಾರಿಗಳು, ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅವರ ಮೃತದೇಹವನ್ನು ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ:

