ರಾಮನಗರ: ಜಿಲ್ಲೆಯಲ್ಲಿ ಕಾಡಾನೆ ದಾಳಿ ಮುಂದುವರಿದಿದ್ದು, ಭಾನುವಾರ ಬೆಳ್ಳಂಬೆಳಗ್ಗೆ ಕಾಡಾನೆ (Wild Elephant) ದಾಳಿಗೆ ರೈತ (Farmer) ಬಲಿಯಾದ ಘಟನೆ ಕನಕಪುರ (Kanakapura) ತಾಲೂಕಿನ ಹೆಗ್ಗನೂರು ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಕರಿಯಪ್ಪ (65) ಮೃತ ರೈತ. ಇಂದು ಮುಂಜಾನೆ 4 ಗಂಟೆಗೆ ಘಟನೆ ಸಂಭವಿಸಿದೆ. ಕರಿಯಪ್ಪ ಜಮೀನಿನಲ್ಲಿ ಹಾಕಿದ್ದ ಮೆದೆ ನೋಡಲು ತೆರಳಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ತಕ್ಷಣ ಗಾಯಾಳು ಕರಿಯಪ್ಪನನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದರಾದರೂ ಮಾರ್ಗಮಧ್ಯೆ ಕರಿಯಪ್ಪ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ರಾಯಚೂರು | ಮತ್ತೋರ್ವ ಬಾಣಂತಿ ಸಾವು – ಮೃತರ ಸಂಖ್ಯೆ 10ಕ್ಕೆ ಏರಿಕೆ
Advertisement
Advertisement
ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ಮೃತ ಕರಿಯಪ್ಪ ಮೃತದೇಹವನ್ನು ರವಾನಿಸಲಾಗಿದೆ. ಸಾತನೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: 46 ವರ್ಷ ಹಳೆ ಕಾಲದ ಹಿಂದೂ ದೇವಾಲಯ ಪತ್ತೆ; ಸಂಭಲ್ ಮಸೀದಿ ಸುತ್ತ ಮುಂದುವರಿದ ತೆರವು ಕಾರ್ಯ
Advertisement