ದಾವಣಗೆರೆ: ಕೃಷಿ ಅಧಿಕಾರಿಗಳನ್ನು ರೈತರೊಬ್ಬರು ಸಚಿವರ ಮುಂಭಾಗವೇ ತರಾಟೆಗೆ ತೆಗೆದುಕೊಂಡು, ಸಚಿವರ ಕಾರಿಗೆ ಅಡ್ಡ ಹಾಕಿದ ಘಟನೆ ದಾವಣಗೆರೆ ಜಿಲ್ಲೆಯ ಈರ್ಚಘಟ್ಟ ಗ್ರಾಮದಲ್ಲಿ ನಡೆದಿದೆ.
ಇಂದು ಕೃಷಿ ಸಚಿವ ಶಿವಶಂಕರರೆಡ್ಡಿ ರೈತರ ಜೊತೆ ಸಂವಾದ ಕಾರ್ಯಕ್ರಮಕ್ಕೆ ಆಗಮಿಸಿದಾಗ ಈ ಘಟನೆ ನಡೆದಿದೆ. ಜಿಲ್ಲೆಯ ಕೃಷಿ ಅಧಿಕಾರಿಗಳು ವ್ಯವಸಾಯ ಉಪಕರಣಕ್ಕೆ ಯಾವುದೇ ಸಬ್ಸಿಡಿ ಕೊಡುತ್ತಿಲ್ಲ. ಕಚೇರಿಗೆ ತೆರಳಿದ್ರು ಯಾವುದೇ ಸ್ಪಂದನೆ ಮಾಡುತ್ತಿಲ್ಲ. ನಾಳೆ ಕಚೇರಿಗೆ ಹೋಗುತ್ತೇನೆ. ಆಗ ಏನಾದ್ರು ಸಬ್ಸಿಡಿ ಕೊಡದೇ ಇದ್ರೆ ಅಧಿಕಾರಿಗಳ ಮನೆ ಮುಂದೆ ಧರಣಿ ಕೂರುತ್ತೇನೆ. ಅದಕ್ಕೂ ಜಗ್ಗಲ್ಲಿಲ್ಲ ಎಂದರೆ ನಿಮ್ಮನ್ನು ಕಾಣುತ್ತೇನೆ ಎಂದು ಜಗಳೂರು ತಾಲ್ಲೂಕಿನ ರೈತ ಹಾಲೇಶ್ ಸಚಿವರಿಗೆ ತರಾಟೆಗೆ ತೆಗೆದುಕೊಂಡರು.
Advertisement
Advertisement
ಕಾರ್ಯಕ್ರಮಕ್ಕೂ ಮುಂಚಿತವಾಗಿ ಗ್ರಾಮದ ಮಲ್ಲಿಕಾರ್ಜುನ್ ಎಂಬವರ ಜಮೀನಿನ ಕೃಷಿ ಹೊಂಡಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮ ನೆರವೇರಿಸಿದರು. ಆದರೆ ಮಳೆಯೇ ಇಲ್ಲದ ಜಿಲ್ಲೆಯಲ್ಲಿ ಕೃಷಿ ಹೊಂಡ ಕ್ಕೆ ಬೋರ್‍ವೆಲ್ ನೀರನ್ನು ತುಂಬಿಸಿ ಸಚಿವರಿಂದ ಮೆಚ್ಚುಗೆ ಪಡಿಯಲು ಅಧಿಕಾರಿಗಳು ಈ ರೀತಿ ಮಾಡಿದ್ದಾರೆ ಗ್ರಾಮಸ್ಥರು ಹೇಳಿದ್ದಾರೆ.
Advertisement
ಮಳೆ ನೀರಿನ ಮೂಲಕ ಕೃಷಿ ಹೊಂಡ ತುಂಬಿಸುವ ಯೋಜನೆಗೆ ಇದಾಗಿದೆ. ಆದರೆ ಈ ಯೋಜನೆಗೆ ಅಧಿಕಾರಿಗಳೇ ಎಳ್ಳುನೀರು ಬಿಟ್ಟಿದ್ದಾರೆ. ಇದರ ಮಾಹಿತಿ ಅರಿಯದ ಕೃಷಿ ಸಚಿವರು ತುಂಬಿದ್ದ ಕೃಷಿ ಹೊಂಡಕ್ಕೆ ಬಾಗಿನ ಅರ್ಪಿಸಿ ಸಂವಾದ ಕಾರ್ಯಕ್ರಮಕ್ಕೆ ತೆರಳಿದರು. ಅಲ್ಲದೇ ಕೃಷಿ ಸಚಿವರು ಬರುತ್ತಾರೆಂದು ಕೃಷಿ ಹೊಂಡಕ್ಕೆ ಅಧಿಕಾರಿಗಳು ತಂತಿ ಬೇಲಿಯನ್ನು ಸಹ ನಿರ್ಮಿಸಿದ್ದರು. ನಂತರ ರೈತರ ಸಂವಾದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಕೃಷಿ ಭಾಗ್ಯ ಪರಿಕರ ವಿತರಿಸಿ ಮಾತನಾಡಿದ ಅವರು, ಆತ್ಮಹತ್ಯೆ ಮಾಡಿಕೊಂಡು ಸತ್ತವರೆಲ್ಲಾ ಸಾಲಭಾದೆಯಿಂದ ಸಾವನ್ನಪ್ಪಿದ್ದಾರೆಂದು ಹೇಳಲು ಸಾಧ್ಯವಿಲ್ಲ. ಕೆಲವರು ತಮ್ಮ ಕೌಟುಂಬಿಕ ತೊಂದರೆ ಹಾಗೂ ಬೇರೆ ಬೇರೆ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಇಂತಹ ಆತ್ಮಹತ್ಯೆ ವಿಚಾರಗಳನ್ನು ಮಾಧ್ಯಮಗಳು ವೈಭವಿಕರಿಸುವುದು ಸರಿಯಲ್ಲ. ನಮ್ಮ ಸರ್ಕಾರ ರೈತರ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿದೆ ಎಂದು ತಿಳಿಸಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews