ಮಂಡ್ಯ: ಸಾಲಬಾಧೆಯಿಂದ ಯುವ ರೈತನೊಬ್ಬ ತನ್ನ ಮೂರು ತಿಂಗಳ ಗರ್ಭಿಣಿ ಪತ್ನಿಯನ್ನು ಬಿಟ್ಟು ತನ್ನ ಆಟೋದಲ್ಲೇ ಆತ್ಯಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಸುಂಕಾತೊಣ್ಣುರು ಗ್ರಾಮದಲ್ಲಿ ನಡೆದಿದೆ.
ಚಂದ್ರು (35) ಆತ್ಮಹತ್ಯೆ ಶರಣಾದ ಯುವ ರೈತ. ಚಂದ್ರು ಬೇರೆಯವರ ಜಮೀನನ್ನು ಗುತ್ತಿಗೆ ಪಡೆದು, ಟೊಮೊಟೋ ಬೆಳೆಯನ್ನು ಬೆಳೆಯುತ್ತಿದ್ದರು. ಅಲ್ಲದೇ ಬೆಳೆಯನ್ನೇ ನಂಬಿ ಸುಮಾರು 6 ಲಕ್ಷ ರೂಪಾಯಿ ಸಾಲಮಾಡಿಕೊಂಡಿದ್ದರು. ಆದರೆ ಏಕಾಏಕಿ ಬೆಳೆ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿಕೊಂಡ ಸಾಲವನ್ನು ತೀರಿಸಲಾಗುವುದಿಲ್ಲವೆಂದು ಬೇಸತ್ತು ಮನೆ ಮುಂದೆ ನಿಲ್ಲಿಸಿದ್ದ ಆಟೋದಲ್ಲೇ ನೇಣಿಗೆ ಶರಣಾಗಿದ್ದಾರೆ.
- Advertisement 2-
- Advertisement 3-
ಚಂದ್ರುವಿನ ಸಾವನ್ನು ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
- Advertisement 4-
ಘಟನೆ ಸಂಬಂಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv