– ರೈತರ ಸಮಸ್ಯೆಗಳ ಬಗ್ಗೆ ಸರ್ಕಾರದ ಕಣ್ತೆರೆಸಲು ಒತ್ತಾಯ
ಚಾಮರಾಜನಗರ: ಜಿಲ್ಲೆಗೆ ಆಗಮಿಸಿದ್ದ ವಿಪಕ್ಷ ನಾಯಕ ಆರ್. ಅಶೋಕ್ (R Ashok) ಅವರಿಗೆ ಇಲ್ಲಿನ ರೈತರು ಕಾರು ಅಡ್ಡಗಟ್ಟಿ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ನಡೆಯಿತು.
ಕೇವಲ ಎಸ್‌ಐಆರ್ ವಿಚಾರದ ಬಗ್ಗೆ ಮಾತನಾಡಲು ಮಾತ್ರ ಚಾಮರಾಜನಗರಕ್ಕೆ ಬಂದಿದ್ದೀರಾ? ಜಿಲ್ಲೆಯಲ್ಲಿ ಸರಿಯಾಗಿ ಮಳೆಯಾಗದೇ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಇಲ್ಲಿ ಬರ ಅಧ್ಯಯನ ನಡೆಸಿಲ್ಲ ಎಂದು ರೈತರು ತೀವ್ರ ಅಸಮಾಧಾನ ಹೊರಹಾಕಿದರು.
ಚಾಮರಾಜನಗರ ಬಿಜೆಪಿ ಜಿಲ್ಲಾ ಘಟಕ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸರ್ಕಾರದ ವೈಫಲ್ಯಗಳು, ರೈತರ ಸಂಕಷ್ಟ ಹಾಗೂ ಜನವಿರೋಧಿ ಆಡಳಿತದ ಬಗ್ಗೆ ಮಾತನಾಡಲಾಯಿತು.
ಎಸ್‌ಐಆರ್ (SIR) ಪ್ರಕ್ರಿಯೆಯು ಮತದಾರರ ಪಟ್ಟಿಯ ಶುದ್ಧೀಕರಣಕ್ಕಾಗಿ ನಡೆಯುತ್ತಿರುವ ಮಹತ್ವದ ಪ್ರಕ್ರಿಯೆಯಾಗಿದ್ದು, ಅದನ್ನು ಗೊಂದಲಗೊಳಿಸುವ ಯಾವುದೇ ಪ್ರಯತ್ನ… pic.twitter.com/UTFksFClJr
— R. Ashoka (@RAshokaBJP) July 13, 2026
ನಗರದ ಜೆಎಸ್ಎಸ್ ಆಸ್ಪತ್ರೆಯ ಬಳಿ ಅಶೋಕ್ ಅವರ ವಾಹನವನ್ನು ತಡೆದು ನಿಲ್ಲಿಸಿದ ರೈತ ಮುಖಂಡರು, ವಿರೋಧ ಪಕ್ಷದ ನಾಯಕರಾಗಿ ನೀವು ರಾಜ್ಯ ಸರ್ಕಾರಕ್ಕೆ ಕಣ್ಣು ತೆರೆಸುವಂತಹ ಕೆಲಸ ಮಾಡಬೇಕು. ಬಿಜೆಪಿಯ ಸಂಸದರು ತಕ್ಷಣವೇ ಜಿಲ್ಲೆಯ ಬರ ಪರಿಸ್ಥಿತಿಯ ಕುರಿತು ಕೇಂದ್ರ ಸರ್ಕಾರಕ್ಕೆ ಸಮಗ್ರ ಮಾಹಿತಿ ಮುಟ್ಟಿಸಬೇಕು ಎಂದು ತರಾಟೆಗೆ ತೆಗೆದುಕೊಂಡರು.
ಈ ಸಂದರ್ಭದಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ಆರ್. ಅಶೋಕ್, ರೈತರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿದರು.
ಶಾಶ್ವತ ನಿವಾಸ ಪ್ರಮಾಣ ಪತ್ರದಿಂದ ದೇಶದ ಭದ್ರತೆಗೆ ಧಕ್ಕೆ
ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಶ್ವತ ನಿವಾಸಿ ಪ್ರಮಾಣಪತ್ರದ ಮೂಲಕ ಎಸ್‌ಐಆರ್ ಪ್ರಕ್ರಿಯೆಯನ್ನೇ ಕಾಂಗ್ರೆಸ್ ಹೈಜಾಕ್ ಮಾಡುತ್ತಿದೆ. ಇದರಿಂದ ದೇಶದ ಭದ್ರತೆಗೆ ಧಕ್ಕೆಯಾಗಿದ್ದು, ಕೂಡಲೇ ಈ ಪ್ರಕ್ರಿಯೆಯನ್ನ ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಸದಾ ಹಸಿರಿನಿಂದ ಕಂಗೊಳಿಸುತ್ತಿದ್ದ ಕಬ್ಬಿನ ಗದ್ದೆಗಳು ಹಾಗೂ ಇತರ ಬೆಳೆಗಳು ಇಂದು ಮಳೆಯ ಕೊರತೆ ಮತ್ತು ಬರಗಾಲದ ಪರಿಣಾಮವಾಗಿ ಕಣ್ಮುಂದೆಯೇ ಒಣಗುತ್ತಿವೆ. ಈ ದೃಶ್ಯ ನೋಡಿದಾಗ ಕರಳು ಹಿಂಡಿದಂತಾಗುತ್ತದೆ. ಸಾಲ ಮಾಡಿ, ಬೆವರು ಸುರಿಸಿ ಬೆಳೆದ ಬೆಳೆ ನಾಶವಾಗುತ್ತಿದ್ದರೂ, ಅನ್ನದಾತನ ಸಂಕಷ್ಟದ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದೆ.… pic.twitter.com/yR9MtFDRoj
— R. Ashoka (@RAshokaBJP) July 13, 2026
ಎಸ್‌ಐಆರ್ ಪ್ರಕ್ರಿಯೆಯ ಮೂಲಕ ಭಾರತೀಯರಿಗೆ ಮಾತ್ರ ಮತದಾನದ ಹಕ್ಕನ್ನ ನೀಡಲಾಗುತ್ತಿದೆ. ಆದರೆ ಕಾಂಗ್ರೆಸ್ ಸರ್ಕಾರ ಎಸ್‌ಐಆರ್ ಪ್ರಕ್ರಿಯೆಯನ್ನ ಹೈಜಾಕ್ ಮಾಡುತ್ತಿದೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದ ನಂತರ ಶಾಶ್ವತ ನಿವಾಸಿ ಪ್ರಮಾಣಪತ್ರ ನೀಡಲಾಗುತ್ತಿದೆ. ಅಂದರೆ ಇಷ್ಟು ದಿನ ನಾವೆಲ್ಲರೂ ಅತಂತ್ರವಾಗಿ ವಾಸಿಸುತ್ತಿದ್ದೆವಾ ಎಂದು ಪ್ರಶ್ನೆ ಮಾಡಬೇಕಿದೆ. ದೇಶದಲ್ಲಿ ಸುಮಾರು 2 ಕೋಟಿ ಬಾಂಗ್ಲಾ ಪ್ರಜೆಗಳಿದ್ದಾರೆ. ಇಂತಹವರಿಗೆ ಪ್ರಮಾಣಪತ್ರ ನೀಡಿದರೆ ಅವರನ್ನು ವಾಪಸ್ ಕಳುಹಿಸಲು ಸಾಧ್ಯವಾಗುವುದಿಲ್ಲ. ಅಲ್ಪಸಂಖ್ಯಾತರನ್ನ ಓಲೈಸಲು ಸರ್ಕಾರ ಈ ಕುತಂತ್ರ ಮಾಡಿದೆ ಎಂದರು.
ಪೌರತ್ವ ನೀಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರವಿದೆ. ಭಾರತೀಯ ನಾಗರಿಕರು ಅಲ್ಲ ಎಂದು ಗೊತ್ತಾದರೆ ಅವರನ್ನು ಸಂಬಂಧಿಸಿದ ದೇಶಕ್ಕೆ ಕಳುಹಿಸುವ ಕೆಲಸವನ್ನ ಕೇಂದ್ರ ಸರ್ಕಾರ ಮಾಡುತ್ತದೆ. ಪಶ್ಚಿಮ ಬಂಗಾಳದಲ್ಲಿ ಈ ಮೊದಲು ಕಾಂಗ್ರೆಸ್‌ನ ಪಾರ್ಟ್‌ನರ್ ಮಮತಾ ಬ್ಯಾನರ್ಜಿ ಅಧಿಕಾರದಲ್ಲಿದ್ದರು. ಆಗ ಅನೇಕ ಬಾಂಗ್ಲಾ ಜನರು ಬಂದಿದ್ದು, ಆ ಬಗ್ಗೆ ಕಾಂಗ್ರೆಸ್ ಪ್ರಶ್ನೆ ಮಾಡಿರಲಿಲ್ಲ. ಅಸ್ಸಾಂ, ಬಿಹಾರದಲ್ಲೂ ಇದೇ ಸಮಸ್ಯೆ ಇದೆ. ನಕ್ಸಲ್ ಸಮಸ್ಯೆ ಆರಂಭವಾಗಲು ಕೂಡ ಕಾಂಗ್ರೆಸ್ ಕಾರಣ. ಕಾಂಗ್ರೆಸ್ ನಾಯಕರು ಇಷ್ಟು ವರ್ಷ ಕತ್ತೆ ಕಾದು, ಈಗ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ಸರ್ಕಾರ ದೇಶದ್ರೋಹಿಗಳಿಗೆ ಮಣೆ ಹಾಕಿದರೆ ಕೋಮು ಗಲಭೆ ಹೆಚ್ಚುತ್ತದೆ. ಈಗಾಗಲೇ ಮುಸ್ಲಿಂ ಸಂಘಟನೆಗಳ ವಿರುದ್ಧದ ಕೇಸುಗಳನ್ನು ವಾಪಸ್ ಪಡೆಯಲಾಗಿದೆ. ಅವರನ್ನು ಓಲೈಸಲು ಪ್ರಮಾಣಪತ್ರ ನೀಡಬೇಕಿಲ್ಲ ಎಂದರು.
